ರೆಡ್ಡಿಗೂ ನಮಗೂ ಸಂಬಂಧವಿಲ್ಲ : ಬಿ ಎಸ್ ವೈ

0
67

ಮಂಗಳೂರು: 

      ಜನಾರ್ದನ ರೆಡ್ಡಿಯವರ ಆಂಬಿಡೆಂಟ್ ಚಿಟ್ ಫಂಡ್ ಜತೆ ರೆಡ್ಡಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನೋಡಿದ್ದು ಬಿಟ್ಟರೆ , ನನಗೆ ಈ ಪ್ರಕರಣದ ಬಗ್ಗೆ ಹೆಚ್ಚು ತಿಳಿದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

     ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ  ಈಗ ನಮ್ಮ ಪಕ್ಷದಲ್ಲಿಲ್ಲ. ಹಾಗಾಗಿ ನಮಗೂ, ಅವರಿಗೂ ಯಾವುದೇ ಸಂಬಂಧ ಇಲ್ಲ. ಈ ಬಗ್ಗೆ ತನಿಖೆ ಆಗಲಿ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ತಪ್ಪು ಯಾರು ಮಾಡಿದ್ರೂ ಕಾನೂನು ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಎಂದಿದ್ದಾರೆ.

      ಇದಕ್ಕೂ ಮುನ್ನ, ಗಾಲಿ ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರು ಯಾರ ರೀತಿ ನಡೆದುಕೊಳ್ಳಬೇಕು, ಏನು ಪ್ರತಿಕ್ರಿಯೆ ನೀಡಬೇಕು ಎಂಬುದನ್ನು ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಇಲ್ಲಿನ ನಾಯಕರಿಗೆ ಸೂಚನೆ ನೀಡಲಾಗಿದೆ. ಹೀಗಾಗಿ, ಒಂದು ಕಾಲದ ಬಿಜೆಪಿಯ ಮಿತ್ರ ಗಾಲಿ ರೆಡ್ಡಿಯ ಬಗ್ಗೆ ಗಪ್ ಚುಪ್ ಆಗಿರುವಂತೆ ಹೈಕಮಾಂಡ್ ನೀಡಿರುವ ಆಜ್ಞೆಯನ್ನು ಪಾಲಿಸುತ್ತಿದ್ದಾರೆ ಎಂಬ ಮಾತಿದೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

LEAVE A REPLY

Please enter your comment!
Please enter your name here