ಟಿಪ್ಪು ವಿವಾದದಿಂದ ಪಾರಾಗಲು ರಿಲ್ಯಾಕ್ಸ್ ಮೂಡ್ ಗೆ ಜಾರಿದ್ರಾ ಸಿಎಂ..!?

0
60

ಬೆಂಗಳೂರು:

     ಉಪ ಚುನಾವಣೆ ಪ್ರಚಾರದ ನಂತರ ವಿಶ್ರಾಂತಿ ಪಡೆಯುವಂತೆ ಮುಖ್ಯಮಂತ್ರಿಗೆ ವೈದ್ಯರು ಸಲಹೆ ಮಾಡಿದ್ದರು. ಅದರಂತೆ ಸಿಎಂ ವಿಶ್ರಾಂತಿ ಪಡೆಯುತ್ತಿದ್ದಾರೆ. 

      ಇಂದಿನಿಂದ ಮೂರು ದಿನಗಳ ಕಾಲ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆ. ಮೂರು ದಿನಗಳು ಅವರು ಕುಟುಂಬದೊಂದಿಗೆ ಕಾಲ ಕಳೆಯುವರು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಮೈಸೂರಿನ ಖಾಸಗಿ ಸ್ಥಳದಲ್ಲಿ ಸಿಎಂ ಕುಮಾರಸ್ವಾಮಿ ರಾಜಕೀಯದ ಹಂಗು ಇಲ್ಲದೇ ಆರಾಮವಾಗಿ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಇಂದು ಬೆಳಿಗ್ಗೆಯೇ ಖಾಸಗಿ ಸ್ಥಳಕ್ಕೆ ಸಿಎಂ ತೆರಳಿದ್ದಾರೆ.

      ಕುಮಾರಸ್ವಾಮಿ ಅವರೊಂದಿಗೆ ಶಾಸಕಿ ಹಾಗೂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಮೂರು ದಿನಗಳ ಕಾಲ ಸಿಎಂ ಜತೆ ಇರಲಿದ್ದಾರೆ.

      ಮೂಲಗಳ ಪ್ರಕಾರ, ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡು ವಿವಾದಕ್ಕೆ ಗುರಿಯಾಗುವುದನ್ನು ತಪ್ಪಿಸಲು ಅದರಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರಿಬ್ಬರೂ ಗೈರು ಹಾಜರಾಗಲಿದ್ದಾರೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here