ರಾಹುಲ್ ಗೆ ದೂರು ನೀಡಲಿರುವ ಅತೃಪ್ತ ಶಾಸಕರು

0
42

ಬೆಂಗಳೂರು

        ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಕಾಂಗ್ರೆಸ್ ಶಾಸಕರ ಹಿತ  ರಕ್ಷಣೆ ಮಾಡದ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ವಿರುದ್ಧ ಡಿಸೆಂಬರ್ 5 ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೂರು ನೀಡಲು ಕಾಂಗ್ರೆಸ್ ಅತೃಪ್ತ ಶಾಸಕರು ತೀರ್ಮಾನಿಸಿದ್ದಾರೆ.

        ಡಿಸೆಂಬರ್ 5 ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಮಂತ್ರಿ ಮಂಡಲ ವಿಸ್ತರಣೆಗೆ ಮುಹೂರ್ತ ನಿಗದಿ ಮಾಡದೇ ಇದ್ದಲ್ಲಿ ಡಿಸೆಂಬರ್ 5 ರಿಂದ 7 ರ ಒಳಗಾಗಿ ದೆಹಲಿಗೆ ತೆರಳಲು ಮುಂದಾಗಿದ್ದಾರೆ.

       ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಸೇರಿದಂತೆ ಹಲವು ಮುಖಂಡರನ್ನು ಅತೃಪ್ತ ಶಾಸಕರು ಭೇಟಿ ಮಾಡಿ ದೂರು ಸಲ್ಲಿಸಲಿದ್ದಾರೆ.

       ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು ಮಂತ್ರಿ ಮಂಡಲ ವಿಸ್ತರಣೆಗೆ ಒಲವು ತೋರಿದ್ದಾರೆ. ಆದರೆ ಸಿದ್ದರಾಮಯ್ಯ ಆಸಕ್ತಿ ಇದ್ದಂತಿಲ್ಲ. ತಮ್ಮ ಆಪ್ತರ ಮೂಲಕ ರಾಜಕೀಯ ಮಾಡಿಸುತ್ತಿರುವ ಅವರಿಗೆ ಕಾಂಗ್ರೆಸ್ಸಿಗರ ಹಿತಾಸಕ್ತಿ ಮರತೆ ಹೋಗಿದೆ ಎಂದು ಕೆಲ ಶಾಸಕರು ಅಸಮಾಧಾನಗೊಂಡಿದ್ದಾರೆ.

        ಆದರೆ ರಾಹುಲ್ ಗಾಂಧಿ ಅವರು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿದ್ದು, ಅವರು ಕಾಂಗ್ರೆಸ್ ಶಾಸಕರಿಗೆ ಇನ್ನೂ ಸಮಯಾವಕಾಶ ನೀಡಿಲ್ಲ. ಹಾಗೊಂದು ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಾಧ್ಯವಾಗದೇ ಇದ್ದಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here