ದರ್ಶನ್ ಕಾರು ಅಪಘಾತಕ್ಕೆ ಹೊಸ ಟ್ವಿಸ್ಟ್ !!!

0
672

ಮೈಸೂರು :

      ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು 4 ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 

ದರ್ಶನ್ ಗೆ ಅಪಘಾತ !

ಅಪಘಾತಕ್ಕೆ ಮುಖ್ಯ ಕಾರಣ:

      ಈ ಘಟನೆ ಸಂಬಂಧ ಆರ್‌ಟಿಓ ಅಧಿಕಾರಿಗಳು ವರದಿ ಸಲ್ಲಿಸಿದ್ದು, ದರ್ಶನ್ ಸ್ನೇಹಿತ ಆಂಟೋನಿ ರಾಯ್ ಕಾರನ್ನು ಚಾಲನೆ ಮಾಡುತ್ತಿದ್ದರು ಎನ್ನುವ ಅಂಶ ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಮೈಸೂರಿನ ವಿವಿಪುರಂ ಸಂಚಾರಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

      ಯಾವುದೇ ತಾಂತ್ರಿಕ ಕಾರಣದಿಂದ ಅಪಘಾತ ಆಗಿಲ್ಲ ಎಂಬ ಮಾಹಿತಿ ಬಂದಿದೆ. ಇನ್ನು ಈ ಸಂಬಂಧ ನಟರಾದ ದರ್ಶನ್‌, ದೇವರಾಜ್‌, ಪ್ರಜ್ವಲ್‌ ದೇವರಾಜ್‌, ಚಾಲಕ ಆಂಟೋನಿ ಹಾಗೂ ಕಾರಿನಲ್ಲಿದ್ದ ಪ್ರಕಾಶ್‌ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಎಲ್ಲರ ಹೇಳಿಕೆಯಲ್ಲೂ ಆಂಟೋನಿ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಅಭಿಪ್ರಾಯ ಬಂದಿದೆ. ಹೀಗಾಗಿ ತಪ್ಪಿತಸ್ಥ ಚಾಲಕ ಆಂಟೋನಿ ರಾಯ್‌ಗೆ ಕಾನೂನಿನ ಪ್ರಕಾರ ಶಿಕ್ಷೆ ನೀಡುವಂತೆ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಮನವಿ ಮಾಡಿದ್ದಾರೆ. 

ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್

      ಸೆ. 23 ರಂದು ದರ್ಶನ್ ಅವರ ಕಾರು ಅಪಘಾತವಾಗಿತ್ತು. ಆ ಕಾರನ್ನು ಅವರ ಸ್ನೇಹಿತ ಆಂಟೋನಿ ರಾಯ್ ಚಾಲನೆ ಮಾಡುತ್ತಿದ್ದರು. ಮೈಸೂರು ರಿಂಗ್ ರಸ್ತೆಯ ಜಂಕ್ಷನ್ ಬಳಿ ಆಂಟೋನಿ ರಾಯ್ ನಿರ್ಲಕ್ಷ್ಯತನದಿಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿತ್ತು.

     ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿದ್ದು, ಅಪಘಾತದ ಮಾಹಿತಿಯನ್ನ ಚಾರ್ಜ್‌ಶೀಟ್‌ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here