ಹಾಲಿ ‘ಕೈ’ ಸಂಸದರ ಕ್ಷೇತ್ರಗಳನ್ನು ಬಿಟ್ಟುಕೊಡಲ್ಲ – ದಿನೇಶ್ ಗುಂಡೂರಾವ್

 ಬೆಂಗಳೂರು:

      ಹಾಲಿ ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

      ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಸೇರಿದಂತೆ ಹಾಲಿ ಸಂಸದರ ಕ್ಷೇತ್ರಗಳನ್ನು ಬಿಟ್ಟುಕೊಡಬಾರದು ಎನ್ನುವ ತೀರ್ಮಾನಕ್ಕೆ ಬಂದಿದ್ದೇವೆ. ಸೀಟು ಹಂಚಿಕೆ ವಿಚಾರದಲ್ಲಿ ಯಾರಲ್ಲೂ ವೈಯಕ್ತಿಕ ಪ್ರತಿಷ್ಠೆ ಇಲ್ಲ. ಎಲ್ಲ ಸಮಸ್ಯೆಯು ಪರಿಹಾರವಾಗುತ್ತದೆ. ಮಂಡ್ಯ ಮತ್ತು ಹಾಸನದಲ್ಲಿ ಜೆಡಿಎಸ್ ಹಾಲಿ ಸಂಸದರಿದ್ದಾರೆ. ಹೀಗಾಗಿ ಜೆಡಿಎಸ್‍ಗೆ ಬಿಟ್ಟುಕೊಡಲು ತೀರ್ಮಾನ ಮಾಡಲಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್‍ನಲ್ಲಿ ಸ್ಥಳೀಯವಾಗಿ ಕೆಲ ಭಿನ್ನಾಭಿಪ್ರಾಯಗಳಿವೆ. ಅದನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದರು.

      ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಾಳೆ ಸ್ಥಳೀಯ ಮುಖಂಡರ ಸಭೆ ನಡೆಯಲಿದೆ. ಈ ವೇಳೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಪಡೆಯುತ್ತೇವೆ. ಯಾರು ಸ್ಪರ್ಧೆ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ಮಾಡುತ್ತೇವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ   

Recent Articles

spot_img

Related Stories

Share via
Copy link
Powered by Social Snap