ನ.17 ರಿಂದ 19ರವರೆಗೆ ರಾಜ್ಯದಲ್ಲಿ ಬರಪೀಡಿತ ಜಿಲ್ಲೆಗಳಲ್ಲಿ ಅಧ್ಯನ ಪ್ರವಾಸ

ಬೆಂಗಳೂರು

        ರಾಜ್ಯದ 100 ತಾಲ್ಲೂಕುಗಳಲ್ಲಿ ಅಭಾವ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ ಬರ ಅಧ್ಯಯನ ತಂಡ ಇದೇ 17ರಿಂದ 19ರವರೆಗೆ ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಅಧ್ಯನ ಪ್ರವಾಸ ಕೈಗೊಳ್ಳಲಿದೆ.

          ಕಂದಾಯ ಸಚಿವಆ ರ್.ವಿ.ದೇಶಪಾಂಡೆ ಈ ವಿಷಯ ತಿಳಿಸಿದ್ದು, “ಒಟ್ಟು 10 ಸದಸ್ಯರಿರುವ ಈ ತಂಡವು ಮೂರು ಉಪತಂಡಗಳಾಗಿ ರಾಜ್ಯದ ನಾನಾ ಭಾಗಗಳಿಗೆ ಭೇಟಿ ನೀಡಲಿವೆ. ಗೌತಮ್ ಅವರ ನೇತೃತ್ವದ ಮೊದಲನೇ ತಂಡ 17ರಂದು ಯಾದಗಿರಿ, ರಾಯಚೂರು, ಎರಡನೇ ದಿನ ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಈ ಜಿಲ್ಲೆಗಳಲ್ಲಿ ಬರಪೀಡಿತ ಸ್ಥಳಗಳಿಗೆ ತೆರಳಲಿದೆ,’’ ಎಂದಿದ್ದಾರೆ.

        “ಇದೇ ರೀತಿಯಲ್ಲಿ ಡಾ.ಮಹೇಶ್ ನೇತೃತ್ವದ ಎರಡನೇ ತಂಡವು ಈ ಅವಧಿಯಲ್ಲಿ ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಗದಗ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಹಾಗೆಯೇ, ಮಾನಸ್‍ಚೌಧರಿ ನೇತೃತ್ವದ ಮೂರನೇ ತಂಡವು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ತೆರಳಲಿದೆ,’’ ಎಂದುಕಂದಾಯ ಸಚಿವರು ತಿಳಿಸಿದ್ದಾರೆ.

        “ಕೇಂದ್ರದ ಈ ಅಂತರ್-ಸಚಿವಾಲಯ ತಂಡ ತಮ್ಮತಮ್ಮ ಜಿಲ್ಲೆಗಳಿಗೆ ಬಂದಾಗ, ಆಯಾ ಭಾಗದ ಜನಪ್ರತಿನಿಧಿಗಳು ಬರ ಮತ್ತು ಅದರಿಂದಾಗಿರುವ ಹಾನಿ, ನಷ್ಟದ ಬಗ್ಗೆ ತಂಡದ ಸದಸ್ಯರಿಗೆ ಸೂಕ್ತ ಮಾಹಿತಿ ನೀಡಬೇಕು,’’ ಎಂದು ದೇಶಪಾಂಡೆ ಹೇಳಿದ್ದಾರೆ.

“ರಾಜ್ಯದಲ್ಲಿ ಈಗಾಗಲೇ 100 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಲ್ಲದೆ, ಅಕ್ಟೋಬರ್ 30 ರಂದು ತಾವು ಮತ್ತು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ದೆಹಲಿಗೆ ಹೋಗಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಬರ ಪರಿಸ್ಥಿತಿಯನ್ನು ನಿಭಾಯಿಸಲು ಎನ್.ಡಿ.ಆರ್.ಎಫ್ ನಿಧಿಯಿಂದ 2,434 ಕೋಟಿ ರೂ.ಗಳನ್ನು ಪರಿಹಾರವಾಗಿ ಒದಗಿಸಲು ಮನವಿ ಸಲ್ಲಿಸಿದ್ದೆವು. ಈ ಸಂದರ್ಭದಲ್ಲಿ ಬರದಿಂದಾಗಿ ಒಟ್ಟು 16,662 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ನಷ್ಟ ರಾಜ್ಯದಲ್ಲಿ ಸಂಭವಿಸಿರುವುದನ್ನು ಸಿಂಗ್ ಅವರ ಗಮನಕ್ಕೆ ತಂದಿದ್ದೇವೆ,’’ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap