ಟಿಪ್ಪು ಜಯಂತಿ ವಿರೋಧಿಗಳಿಗೆ ಸಿದ್ದು ಫುಲ್ ಕ್ಲಾಸ್…!

ಬೆಂಗಳೂರು:

       ಮಾಜಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿ ಶುಭಕೋರಿದ್ದು, ಸರಣಿ ಟ್ವೀಟ್ ಮೂಲಕ ಟಿಪ್ಪುವನ್ನು ಕೊಂಡಾಡಿದ್ದಾರೆ. ಅಷ್ಟೇ ಅಲ್ಲದೆ ಟಿಪ್ಪು ಜಯಂತಿ ವಿರೋಧಿಗಳಿಗೆ ಫುಲ್‍ಕ್ಲಾಸ್ ತೆಗೆದುಕೊಂಡು, ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಮರ್ಥಿಸಿಕೊಂಡಿದ್ದಾರೆ.

      ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ ದೇಶ ಪ್ರೇಮಿ ಮೈಸೂರು ಹುಲಿ ಟಿಪ್ಪು ಸುಲ್ತಾನರ ಜನ್ಮದಿನದಂದು ಅವರ ದೇಶಪ್ರೇಮ, ತ್ಯಾಗ ಮತ್ತು ಜನಪರ ಆಡಳಿತವನ್ನು ನಾವೆಲ್ಲರೂ ಸ್ಮರಿಸೋಣ ಎಂದು ಟಿಪ್ಪು ಜಯಂತಿಯ ಶುಭಾಷಯ ಕೋರಿದ್ದಾರೆ. 

      ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ. ಇದಕ್ಕಾಗಿ ಬಿಜೆಪಿ ಸರ್ಕಾರವೇ ಪ್ರಕಟಿಸಿದ ಪುಸ್ತಕ ಓದಬೇಕಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

      ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ  ಎಂದು ತಿಳಿಸಿದ್ದಾರೆ.  

      ಟಿಪ್ಪು ಜಯಂತಿ ಆಚರಣೆ ಬಗ್ಗೆ @BJP4Karnataka ನಿಲುವು ಆತ್ಮವಂಚನೆಯಿಂದ ಕೂಡಿದ್ದಾಗಿದೆ. ತಾವು ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿ, ಟಿಪ್ಪುವನ್ನು ಹಾಡಿ-ಹೊಗಳಿ, ಪುಸ್ತಕ ಬರೆಸಿ ಈಗ ವಿರೋಧಿಸುತ್ತಿರುವುದು ಸ್ವಾರ್ಥರಾಜಕಾರಣವಲ್ಲದೆ ಮತ್ತೇನು?  ಎಂದು ಟೀಕಿಸಿದ್ದಾರೆ.

      ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯ ಸಂಪ್ರದಾಯವನ್ನು ಹಿಂದಿನ ನಮ್ಮ ಸರ್ಕಾರ ಹುಟ್ಟುಹಾಕಿದ್ದಲ್ಲ, ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಜಯಂತಿ ಆಚರಣೆ ಪಟ್ಟಿಗೆ ಇನ್ನಷ್ಟು ಹೆಸರುಗಳನ್ನು ಸೇರಿಸುತ್ತಾ ಬಂದಿವೆ.ಆಗ ಕಾಣಿಸಿಕೊಳ್ಳದ ಪ್ರತಿರೋಧ ಟಿಪ್ಪು ಆಚರಣೆ ಬಗ್ಗೆ ಮಾತ್ರ ಯಾಕೆ? ಎಂದು ಪ್ರಶ್ನಿಸಿದ್ದಾರೆ. 

 

Recent Articles

spot_img

Related Stories

Share via
Copy link
Powered by Social Snap