BBMP ಉಪ ಮೇಯರ್ ಅವಿರೋಧವಾಗಿ ಆಯ್ಕೆ!!!

0
48

ಬೆಂಗಳೂರು:

      ಬಿಬಿಎಂಪಿಯ ಉಪಮೇಯರ್ ಆಗಿ ಜೆಡಿಎಸ್ ನ ಭದ್ರೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

      ರಮೀಳಾ ಉಮಾಶಂಕರ್ ಅವರ ನಿಧನದಿಂದ ತೆರವಾಗಿದ್ದ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ ಭದ್ರೇಗೌಡ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

      ಬಿಬಿಎಂಪಿ ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿಕೂಟದ ಉಪಮೇಯರ್ ಅಭ್ಯರ್ಥಿಯಾಗಿ ನಾಗಪುರ ವಾರ್ಡ್ ನ ಸದಸ್ಯ ಭದ್ರೆಗೌಡ ನಾಮಪತ್ರ ಸಲ್ಲಿಸಿದ್ದರು. ಆದರೆ ಬಿಬಿಎಂಪಿ ಉಪಮೇಯರ್ ಚುನಾವಣೆ ಅಖಾಡದಿಂದ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಹಿಂದೆ ಸರಿದಿತ್ತು. ಈ ಮೂಲಕ ಬಿಬಿಎಂಪಿಯ 53 ನೇ ಉಪಮೇಯರ್ ಆಗಿ ಜೆಡಿಎಸ್ ನ ಭದ್ರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

      ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಶಿವಯೋಗಿ ಕಳಸದ್ ಅವರು, ಭದ್ರೇ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದ್ದರು.

 

LEAVE A REPLY

Please enter your comment!
Please enter your name here