ದಟ್ಟ ಮಂಜು : ಬಸ್-ಲಾರಿ ಅಪಘಾತದಲ್ಲಿ ಇಬ್ಬರ ದುರ್ಮರಣ!!

ಚಿಕ್ಕಬಳ್ಳಾಪುರ :

 

 

 

 

     ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ರಸ್ತೆ ಕಾಣದೇ ಲಾರಿಗೆ ಹಿಂಬದಿಯಿಂದ ಬಂದ ಆಂದ್ರ ಸಾರಿಗೆ ಬಸ್ ಗುದ್ದಿದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಗಲಗುರ್ಕಿ ರಾಷ್ಟ್ರೀಯ ಹೆದ್ದಾರಿ-7 ರಲ್ಲಿ ನಡೆದಿದೆ. 

      ಅಪಘಾತದಲ್ಲಿ ಆಂಧ್ರ ಸಾರಿಗೆ ಬಸ್ ಚಾಲಕ ಸೇರಿ ಪ್ರಯಾಣಿಕ ಹೇಮಂತ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರ ಸ್ಥಿತಿ ಚಿಂತಾಜನಕವಾಗಿದ್ದು, 15 ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯಾಗಳಾಗಿವೆ. ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವರನ್ನು ಬೆಂಗಳೂರಿಗೆ ರವಾನಿಸಲಾಗಿದೆ.

      ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap