ಜಾರಕಿಹೊಳಿಯಿಂದ ಬಿಜೆಪಿ ಅಭ್ಯರ್ಥಿಗೆ ಬೆಂಬಲ!!?

0
23

ಬೆಳಗಾವಿ:

      ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಮತದಾನಕ್ಕೂ ಮುನ್ನವೇ ಪಕ್ಷದ ನಾಯಕರಿಗೆ ದೊಡ್ಡ ಶಾಕ್ ನೀಡಿದ್ದಾರೆ.

      ಬೆಳಗಾವಿಯಲ್ಲಿರುವ ರಮೇಶ್ ಜಾರಕಿಹೊಳಿ ಯಾವುದೇ ಕಾಂಗ್ರೆಸ್​ ಚಟುವಟಿಕೆ, ಪ್ರಚಾರ ಸಭೆಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ಈಗ ಧಿಡೀರ್ ಕ್ಷೇತ್ರದಲ್ಲಿ ಆಪ್ತರು ಮತ್ತು ಕಾರ್ಯಕರ್ತರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿರಲು ತೀರ್ಮಾನ ಕೈಗೊಂಡಿದ್ದಾರೆಂದು ಹೇಳಲಾಗಿದ್ದು, ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆನ್ನಲಾಗಿದೆ.

      ಜಾರಕಿಹೊಳಿಯವರ ಈ ನಡೆಯಿಂದ ಕಾಂಗ್ರೆಸ್​ ವಲಯದಲ್ಲಿ ನಡುಕ ಮೂಡಿಸಿದ್ದು, ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ಸೇರ್ಪಡೆಯಾಗಲಿದ್ದಾರಾ ಎಂಬ ಅನುಮಾನ ಮೂಡುವಂತೆ ಮಾಡಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

LEAVE A REPLY

Please enter your comment!
Please enter your name here