ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ

0
609

ಚೆನ್ನೈ:

      ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಚೆನ್ನೈಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

      ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಅಂಡ್ ಮೆಡಿಕಲ್ ಸೆಂಟರ್ ನ ಪ್ರಖ್ಯಾತ ವೈದ್ಯರಾದ ಮಹಮ್ಮದ್ ರೇಲಾ ಅವರ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಜಿಎಸ್ ನ ಡಾ. ರವೀಂದ್ರ ಅವರ ಉಪಸ್ಥಿತಿಯಲ್ಲೇ ಶಸ್ತ್ರಚಿಕಿತ್ಸೆ ನಡೆದಿದೆ.

ಸಿದ್ಧಗಂಗಾ ಶ್ರೀಗಳಿಗೆ ಇಂದು ಶಸ್ತ್ರಚಿಕಿತ್ಸೆ

      ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಶ್ರೀಗಳನ್ನು ಸದ್ಯಕ್ಕೆ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿದ್ದು, ಇನ್ನೂ 2 ಗಂಟೆಗಳ ಕಾಲ ಐಸಿಯುನಲ್ಲೇ ಇರುತ್ತಾರೆ. ಶ್ರೀಗಳಿಗೆ ಎಚ್ಚರಗೊಂಡ ಬಳಿಕ ಮತ್ತೆ ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಸದ್ಯಕ್ಕೆ ಸಿದ್ದಗಂಗಾ ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂಬ ಮಾಹಿತಿ ಲಭ್ಯವಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here