ಬಹಿರಂಗ ಪ್ರಚಾರ ಇಂದು ಸಂಜೆಗೆ ಅಂತ್ಯ

0
46

ಬೆಂಗಳೂರು:

      ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ನವೆಂಬರ್‌ ಮೂರರಂದು ಮತದಾನ ನಡೆಯಲಿದೆ. ಹೀಗಾಗಿ ಮತದಾನ ಆರಂಭಕ್ಕೆ 48 ಗಂಟೆಗೆ ಮುನ್ನ ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ.

      ರಾಜ್ಯದ ಎರಡು ವಿಧಾನಸಭೆ, ಮೂರು ಲೋಕಸಭಾ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 39 ಕೇಂದ್ರಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನವೆಂಬರ್ 3ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದರು. 

      ಇಂದು ಸಂಜೆಯ ನಂತರ ರಾಜಕೀಯ ಪಕ್ಷಗಳು, ಮುಖಂಡರು, ತಾರಾ ಪ್ರಚಾರಕರು ಸ್ಪರ್ಧಿಸಿರುವ ಅಭ್ಯರ್ಥಿಗಳು ಬಹಿರಂಗ ಪ್ರಚಾರ ನಡೆಸಬಾರದು.  ಉಪಸಮರದ ಅಖಾಡದಲ್ಲಿ ಸೆಣೆಸುತ್ತಿರುವ ಘಟಾನುಘಟಿ ನಾಯಕರು ಗುರುವಾರ ಬೆಳಗ್ಗೆ ಶಸ್ತ್ರಾಸ್ತ್ರ ಕೆಳಗಿಳಿಸಬೇಕಿದೆ.

 

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here