ಬೆಂಗಳೂರು:
ಕಳೆದ ಕೆಲವು ದಿನಗಳಿಂದ ದೆಹಲಿ, ಗುರುಗ್ರಾಮದಲ್ಲಿ ಬೀಡುಬಿಟ್ಟಿದ್ದ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಅಥವಾ ರಾತ್ರಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದ್ದು, ಈ ವೇಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ ಎನ್ನಲಾಗಿದೆ.
ತುಮಕೂರಿಗೆ ಆಗಮಿಸಿ, ತೀವ್ರ ಅನಾರೋಗ್ಯದಿಂದ ಬಳಲುತ್ತಿರು ಸಿದ್ದಗಂಗಾ ಶ್ರೀಗಳ ಆರೋಗ್ಯ ಕುರಿತು ವೈದ್ಯರೊಂದಿಗೆ ಚರ್ಚಿಸಿ ಯಡಿಯೂರಪ್ಪ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯ ವರಿಷ್ಠ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಯಡಿಯೂರಪ್ಪ ಬೆಂಗಳೂರಿಗೆ ಆಗಮಿಸಲಿದ್ದು, ನಂತರ ತುಮಕೂರಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ