ಇಂದು 4 ವಿಧಾನಸಭೆಗಳ ಚುನಾವಣಾ ದಿನಾಂಕ ಪ್ರಕಟ

ನವದೆಹಲಿ: 

Related image

      ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡ ಮತ್ತು ಮಿಝೋರಾಮ್ ರಾಜ್ಯಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಿಸಲಿದೆ.

      ಕೇಂದ್ರ ಚುನಾವಣಾ ಆಯೋಗ ಅಪರಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯನ್ನು ಆಯೋಜಿಸಿದ್ದು, ಇದೇ ವೇಳೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ. ಡಿಸೆಂಬರ್ ಮೊದಲ ವಾರದಲ್ಲೇ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

      ಬರುವ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗಿಂತ ಮೊದಲು ನಡೆಯಲಿರುವ ನಾಲ್ಕು ರಾಜ್ಯಗಳ ಚುನಾವಣೆ ಹೆಚ್ಚಿನ ಮಹತ್ವ ಪಡೆದಿದೆ. ವಿವಿಧ ಪಕ್ಷಗಳು ಇದಕ್ಕಾಗಿ ತಯಾರಿ ನಡೆಸುತ್ತಿದೆ.  ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಯಲಿದ್ದು, ಛತ್ತೀಸ್‌ಘಢ್ ರಾಜ್ಯದ ಚುನಾವಣೆ ಮಾತ್ರ ಎರಡು ಹಂತದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap