ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!!

0
51

ಬೆಂಗಳೂರು:

      ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಗರದ ಬಸವನಗುಡಿಯ ನ್ಯಾಶನಲ್‌ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.  

      ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ತಾಯಿ ಮೊಬೈಲ್ ಕಿತ್ತುಕೊಂಡಿದ್ದೇ ಕಾರಣ ಎಂದು ಹೇಳಲಾಗಿದೆ. ಯುವಕ ವೇಣು ಸರಿಯಾಗಿ ಕೆಲಸ ಮಾಡದೆ ಮನೆಯಲ್ಲೆ ಇರುತ್ತಿದ್ದ. ಅಲ್ಲದೆ, ಯಾವಾಗಲೂ ಮೊಬೈಲ್​ನಲ್ಲೇ ಮುಳುಗಿರುತ್ತಿದ್ದ. ಹೀಗಾಗಿ ಶುಕ್ರವಾರ ರಾತ್ರಿ ತಾಯಿ ವಸಂತ, ವೇಣುವಿಗೆ ಬೈದು, ಬುದ್ಧಿಮಾತು ಹೇಳಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮೊಬೈಲ್ ಕಿತ್ತುಕೊಂಡು ಹೋಗಿದ್ದರು ಎನ್ನಲಾಗಿದೆ.

      ಇದರಿಂದ ಮನನೊಂದಿದ್ದ ವೇಣು ಇಂದು ಮಧ್ಯಾಹ್ನ ಮೆಟ್ರೋ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿ ಪುರಂ ಪೊಲೀಸರಿಗೆ ವೇಣು ತಾಯಿ ವಸಂತ ಅವರು ಪ್ರಾಥಮಿಕ ಮಾಹಿತಿ ನೀಡಿದ್ದಾರೆನ್ನಲಾಗಿದೆ.

      ಯುವಕ ಆತ್ಮಹತ್ಯೆ ಯತ್ನಿಸಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೆಟ್ರೋ ರಕ್ಷಣಾ ಸಿಬ್ಬಂದಿ ಎಚ್ಚರಿಕೆಯಿಂದ ಇದ್ದರೂ ಕೂಡ ಘಟನೆ ನಡೆದಿದೆ. ಘಟನೆಯಿಂದ ಸುಮಾರು 45 ನಿಮಿಷಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಆದರೆ ಸದ್ಯ ಸಂಚಾರ ಪುನರ್ ಆರಂಭಗೊಂಡಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here