ಅಖಿಲೇಶ್‌ ಯಾದವ್‌ ರನ್ನು ಭೇಟಿ ಮಾಡಿದ ನಿಖಿಲ್‌ ಕುಮಾರಸ್ವಾಮಿ

ಲಖನೌ:

    ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

    ಲಖನೌದ ಅಖಿಲೇಶ್ ಯಾದವ್ ಅವರ ನಿವಾಸದಲ್ಲಿ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದರು.

    ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅವರು ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ನಿಖಿಲ್ ಹೇಳಿದರು.

    ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ಮಾಡಿದ್ದು, ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ.

   ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಜೊತೆ ಕೂಲಂಕಷವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap