ಅನ್ನಭಾಗ್ಯ : ಅಕ್ಕಿ ಬದಲಿಗೆ BPL ಕುಟುಂಬಕ್ಕೆ ಹಣ ನೀಡಲು ಮುಂದಾದ ಸರ್ಕಾರ

ಬೆಂಗಳೂರು: 

      ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮ ಅಕ್ಕಿ ಕೊಡಲು ನಿರಾಕರಿಸಿದ ಬೆನ್ನಲ್ಲೇ ಇಂತಹ ಸಂದಿದ್ಗ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರ ಅನುಕೂಲಕ್ಕಾಗಿ  ರಾಜ್ಯ ಸರ್ಕಾರ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ಸಭೆ ನಿರ್ಧರಿಸಿದೆ. 

     ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು ಸಂಪುಟ ತೀರ್ಮಾನಿಸಿದೆ. ಜುಲೈ 1ರಿಂದಲೇ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ. 

    ಇಂದು ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಖಾತೆ ಸಚಿವ ಕೆಎಚ್ ಮುನಿಯಪ್ಪನವರು, ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದ್ದ 5 ಕೆಜಿ ಅಕ್ಕಿಯನ್ನು ಹೊಂದಿಸಲು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಸಮಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ಕೊಡುವವರೆಗೂ ಹಣವನ್ನು ನೀಡಲಾಗುತ್ತದೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap