ಅವಿಶ್ವಾಸ ನಿರ್ಣಯವನ್ನು ಟೀಕಿಸಿದ ಮೋದಿ….!

ನವದೆಹಲಿ: 

      ಕೇಂದ್ರದ ಎನ್‌ ಡಿ ಎ ಸರ್ಕಾರ ವಿರುದ್ಧ ಪ್ರತಿಪಕ್ಷಗಳು ತಂದಿರುವ ಅವಿಶ್ವಾಸ ನಿರ್ಣಯವು ಇಂಡಿಯಾ ಮೈತ್ರಿಕೂಟದಲ್ಲಿ ಪಕ್ಷಗಳ ನಡುವೆ ಪರಸ್ಪರ ಅಪನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ತಮ್ಮ ಪ್ರಸ್ತಾಪದೊಂದಿಗೆ ಯಾರು ಮತ್ತು ಯಾರು ಇಲ್ಲ ಎಂಬುದನ್ನು ಪರೀಕ್ಷಿಸಲು ಈ ಮೈತ್ರಿಕೂಟ ಮುಂದಾಗಿದೆ. ಅವರ ಮಧ್ಯೆಯೇ ಪರಸ್ಪರ ನಂಬಿಕೆಯಿಲ್ಲ ಎಂದು ಕಾಣಿಸುತ್ತಿದೆ ಎಂದಿದ್ದಾರೆ. 

    ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿರೋಧ ಪಕ್ಷದ ಮೈತ್ರಿಯನ್ನು ‘ಘಮಾಂಡಿಯಾ’ (ದುರಹಂಕಾರದಿಂದ ಗುರುತಿಸಲಾಗಿದೆ) ಎಂದು ಬಣ್ಣಿಸಿದರು. ದೆಹಲಿ ಸೇವಾ ಮಸೂದೆಯ ಮೇಲೆ ಮತದಾನವನ್ನು ಸೆಮಿಫೈನಲ್ ನಲ್ಲಿ ಗೆಲುವು ಕಂಡಿದೆ ಎಂದು ಬಣ್ಣಿಸಿ ಅದಕ್ಕೆ ರಾಜ್ಯಸಭಾ ಸದಸ್ಯರನ್ನು ಅಭಿನಂದಿಸಿದರು.

   ರಾಷ್ಟ್ರೀಯ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಮೋದಿ, 2024ರ ಲೋಕಸಭೆ ಚುನಾವಣೆಗೆ ಮೊದಲು ರಾಜ್ಯಸಭೆಯಲ್ಲಿ ಮತದಾನವನ್ನು ಸೆಮಿಫೈನಲ್ ಎಂದು ಬಣ್ಣಿಸಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap