ಅಸ್ಸಾಂ: ಉಗ್ರ ದಾಳಿಯಲ್ಲಿ 11 ಜನರ ಸಾವು

ಇಂಫಾಲ:

    ಶಂಕಿತ ಉಗ್ರರು ಇಂಫಾಲ್ ಪೂರ್ವ ಜಿಲ್ಲೆಯ ಖಮೆಲಾಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡು ಹಾರಿಸಿದ್ದು, ಕನಿಷ್ಠ ಒಂಬತ್ತು ಗ್ರಾಮಸ್ಥರು ಸಾವಿಗೀಡಾಗಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ಸಾವಿನ ಸಂಖ್ಯೆ 11 ಎಂದು ಅನಧಿಕೃತ ಮೂಲಗಳು ತಿಳಿಸಿವೆ.

    ಮಂಗಳವಾರ ತಡರಾತ್ರಿ ಖಮೆಲಾಕ್ ಗ್ರಾಮದ ಮೇಲೆ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸಿದ್ದು, ಗ್ರಾಮಸ್ಥರ ಮೇಲೆ ಮನಸೋಇಚ್ಛೆ ಗುಂಡು ಹಾರಿಸಿದ್ದಾರೆ. ಈ ವೇಳೆ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಉಗ್ರರು ತಮ್ಮ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಜನರ ಮೇಲೆ ಗುಂಡುಗಳ ಮಳೆಗರೆದಾಗ ಸಂತ್ರಸ್ತರು ಮಲಗಿದ್ದರು ಅಥವಾ ಕೆಲವರು ಊಟ ಆಗಷ್ಟೇ ಊಟವನ್ನು ಮುಗಿಸಿದ್ದರು. ಗಾಯಾಳುಗಳನ್ನು ತಕ್ಷಣವೇ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.

    ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap