ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು : ಕೆಂಪಣ್ಣ

ಬೆಂಗಳೂರು:

    ರಾಜ್ಯ ಸರ್ಕಾರದ ವಿರುದ್ಧ ಯಾರೂ ಕಮಿಷನ್ ಆರೋಪವನ್ನು ಮಾಡಿಲ್ಲ ಎಂದು ಹೇಳಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಶುಕ್ರವಾರ ಆಗ್ರಹಿಸಿದ್ದಾರೆ.

   ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಸರ್ಕಾರಕ್ಕೆ ಒತ್ತಾಯಿಸಿದರು.

   ಕೋಟಿ ಕೋಟಿ ರೂಪಾಯಿಗಳನ್ನು ಬ್ಯಾಂಕ್, ಖಾಸಗಿ ಮತ್ತಿತರ ಮೂಲಗಳಿಂದ ಸಾಲ ತಂದು ಕಾಮಗಾರಿಗಳನ್ನು ಮುಗಿಸಲಾಗಿರುತ್ತದೆ. ಹಲವಾರು ಪ್ರಕರಣಗಳಲ್ಲಿ ಮನೆ, ಚಿನ್ನ ನಿವೇಶನಗಳ ಪತ್ರಗಳನ್ನು ಅಡವಿಟ್ಟು ಸಾಲ ಮಾಡಲಾಗಿರುತ್ತದೆ. ಕೆಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಿಡುಗಡೆ ಮಾಡಲೆಂದೇ ಹಣವನ್ನು ಎತ್ತಿ ಇಡಲಾಗಿದೆ.

    ಉದಾಹರಣೆಗೆ ಗುತ್ತಿಗೆದಾರರಿಗೆ ಬಿಡುಗಡೆ ಮಾಡಲೆಂದೇ ಸರಕಾರ ಬಿಬಿಎಂಪಿಗೆ ರೂ. 675 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಆದರೂ ಸರಕಾರ ಬಿಬಿಎಂಪಿ ಆಯುಕ್ತರು ಮೇಲಿನಿಂದ ಆದೇಶ ಬಂದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಎಲ್ಲರೂ ಮುಂದಿನ ವಾರ, ಕೆಲವೇ ದಿನ ಎಂದು ಸಬೂಬು ಹೇಳುತ್ತಾ ಬಂದರು. ಸರ್ಕಾರ 28-06-2023 ಮತ್ತು 30-07-2023 ರಂದು ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಣ ಬಿಡುಗಡೆ ಮಾಡುವುದು ಎಂದು ಸುತ್ತೋಲೆ ಹೊರಡಿಸಿದೆಯಾದರೂ ಕಾರ್ಯರೂಪಕ್ಕೆ ಬಂದಿಲ್ಲ. ಸಂಬಂಧಪಟ್ಟ ಸಚಿವರಿಂದ ಆದೇಶ ಬಂದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಮಧ್ಯೆ ಸಂಘ ಕೈಚೆಲ್ಲಿ ಕುಳಿತುಕೊಳ್ಳದೇ ಸಿಎಂ ಮತ್ತು ಡಿಸಿಎಂ ಇಬ್ಬರಿಗೂ ನಿರಂತರವಾಗಿ ನೆನಪು ಮಾಡುತ್ತಲೇ ಬಂದಿದ್ದೇವೆ.
 
    ನಮ್ಮ ಜಿಲ್ಲಾ ಆಯಾ ಜಿಲ್ಲೆಗಳ ಮಟ್ಟದಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿರುತ್ತಾರೆ. ಆದರೂ ಸರ್ಕಾರ ಗುತ್ತಿಗೆದಾರರ ಸಂಕಟವನ್ನು ಆಲಿಸಲು ಸಿದ್ಧವಿಲ್ಲ ಎಂದರೆ ಏನರ್ಥ? ಎಂದು ಪ್ರಶ್ನಿಸಿದರು.

ಕಾಮಗಾರಿಗಳನ್ನು ಪ್ರಮುಖವಾಗಿ ಕೈಗೊಳ್ಳುವ ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಲಾಖೆಗಳಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಕೆಲಸಗಳಿಗೂ ಹಣ ಬಿಡುಗಡೆ ಮಾಡದಿದ್ದರೆ ಗುತ್ತಿಗೆದಾರರು ಏನು ಮಾಡಬೇಕು?… ಹಣ ಬಿಡುಗಡೆಯಾಗುವುದು ಎರಡು ಮೂರು ತಿಂಗಳು ತಡವಾದರೂ ಗುತ್ತಿಗೆದಾರರಿಗೆ ಸಿಗುವ ಲಾಭ ಬಡ್ಡಿಗೆ ಹೋಗುತ್ತದೆ.

    ಇಂತಹ ಕಷ್ಟಗಳನ್ನು ಯಾರಲ್ಲಿ ಹೇಳಿಕೊಳ್ಳಬೇಕು?..ಗುತ್ತಿಗೆದಾರರು ಆಶಾಭಾವನೆಯಿಂದ ಚಾತಕ ಪಕ್ಷಿಗಳಂತೆ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡುವುದನ್ನೇ ಕಾಯುತ್ತಿದ್ದಾರೆ ಎಂದು ಹೇಳಿದರು.ಇದೇ ವೇಳೆ ಯಾವ ಸಚಿವರೂ ಕಮಿಷನ್ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಮಗೆ ರಾಜ್ಯಾದ್ಯಂತ ಮಾಹಿತಿ ಬಂದಿದೆ‌. ಯಾರೋ ಮೂರನೇ ವ್ಯಕ್ತಿ ಹೇಳುತ್ತಿರುವುದಕ್ಕೂ ನಮಗೂ ಸಂಬಂಧವಿಲ್ಲ ಎಂದು ತಿಳಿಸಿದರು.

    ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಮೊದಲಿಗೆ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಪತ್ರ ನೀಡಿದ್ದೆವು. ಬಳಿಕ ಪ್ರಧಾನಿ ಮೋದಿಯವರಿಗೆ ಪತ್ರ ನೀಡಿದೆವು. ಸಿದ್ದರಾಮಯ್ಯ, ಕುಮಾರಸ್ವಾಮಿ ಹೀಗೆ ಹಲವರಿಗೂ ಪತ್ರ ನೀಡಿದ್ದೆವು. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರೂ ಕೂಡ ಗಂಭೀರವಾಗಿ ಪರಿಗಣಿಸಲಿಲ್ಲ.

   ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ ಕರೆದಿದ್ದಕ್ಕೆ ಹೋಗಿದ್ದೆ. ಈಗ ವಿಪಕ್ಷ ನಾಯಕ ಕರೆದರೆ ಹೋಗಲ್ಲ ಎನ್ನುವುದಕ್ಕೆ ಆಗುವುದಿಲ್ಲ. ಬಿಜೆಪಿ ವಿಪಕ್ಷ ನಾಯಕ ಕರೆದರೆ ಹೋಗುತ್ತೇನೆ. ನಾವು ಗುತ್ತಿಗೆದಾರರು, ಗುತ್ತಿಗೆದಾರರ ಪರವಾಗಿ ಮಾತ್ರವೇ ನಾನು ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

   ಬೊಮ್ಮಾಯಿಗೆ ಎಷ್ಟು ಬಾರಿ ಭೇಟಿಯಾಗಿ ಮಾತನಾಡಿದ್ದೆವು. ಆದರೆ, ಅವರು ನಮಗೆ ಭೇಟಿಗೆ ಅವಕಾಶವೇ ಕೊಡಲಿಲ್ಲ. ಅವರಿಗೆ ಮನವಿ ಪತ್ರ ಕೊಟ್ಟೆವು, ಜೇಬಲ್ಲಿ ಇಟ್ಟುಕೊಂಡರು. ಆದರೆ ಕರೆದು ಮಾತಾಡೋ ಕೆಲಸ ಮಾಡಲಿಲ್ಲ. ಬದಲಿಗೆ ಅವರಿಗೆ ಬೇಕಾದವರಿಗೆ ಮಾತ್ರ ಹಣ ಬಿಡುಗಡೆ ಮಾಡಿದ್ದರು. ಆದರೂ ಅವರ ಮೇಲೆ ನಮಗೆ ಈಗಲೂ ಗೌರವ ಇದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap