ಚಿಕ್ಕಬಳ್ಳಾಪುರ:
ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಇಂದು ಆರ್.ಪಿ.ಎಲ್ -2022 ರೆವಿನ್ಯೂ ಪ್ರೀಮಿಯರ್ ಲೀಗ್ ಕಂದಾಯ ಇಲಾಖೆಯ ಅಂತರ ತಾಲ್ಲೂಕು ಕ್ರಿಕೆಟ್ ಮತ್ತು ಥ್ರೋ ಬಾಲ್ ಪಂದ್ಯಾವಳಿಗಳು ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಚಾಲನೆ ನೀಡಿದರು.ಜಿಲ್ಲೆಯ ವಿವಿಧ ತಂಡಗಳು ಸ್ಪರ್ಧಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್,ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಜಿಲ್ಲೆಯ 6 ತಾಲ್ಲೂಕಿನ ತಹಸೀಲ್ದಾರ್ ಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
