ಬೆಂಗಳೂರು
ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ವಾರ್ಡುಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕುಡಿಯುವ ನೀರನ ಸಮಸ್ಯೆಯ ಕುರಿತಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯ ನಂತರ ಸುದ್ಧಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವ ಕುರಿತು ವರದಿ ನೀಡುವಂತೆ ಸೂಚಿಸಲಾಗಿದ್ದು,ಉತ್ತಮ ಗುಣಮಟ್ಟದ ಆಹಾರವನ್ನು ಕಡಿಮೆ ದರದಲ್ಲಿ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈಗ ಬೆಂಗಳೂರು ಮಹಾನಗರ ಪಾಲಿಕೆಗಳ ವಾರ್ಡುಗಳಲ್ಲಿ ಇಂದಿರಾಕ್ಯಾಂಟೀನ್ ತ್ವರಿತಗತಿಯಲ್ಲಿ ಆರಂಭವಾಗಲಿದೆ.ನAತರ ಎಲ್ಲ ಮಹಾನಗರ ಪಾಲಿಕೆಗಳ ವಾರ್ಡುಗಳಲ್ಲಿ ಆರಂಭವಾಗಲಿದೆ ಎಂದು ವಿವರಿಸಿದರು.
ಇಂದಿರಾ ಕ್ಯಾಂಟೀನ್ ಸ್ಥಾಪಿಸುವುದು ಮಹಾನಗರ ಪಾಲಿಕೆಗಳಿಗೆ ಹೊರೆಯಾಗಬಾರದು ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಶೇಕಡಾ ಎಪ್ಪತ್ತರಷ್ಟು ಹಣವನ್ನು ಸರ್ಕಾರವೇ ಭರಿಸಲಿದೆ.ಉಳಿದಂತೆ ಶೇಕಡಾ ಮೂವತ್ತರಷ್ಟು ಹಣವನ್ನು ಆಯಾ ಸ್ಥಳೀಯ ಸಂಸ್ಥೆಗಳು ಭರಿಸಬೇಕು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ