ಇಂಧನ ದರ ಇಳಿಕೆ : ಪ್ರತಿ ಲೀ.ಗೆ 2 ರೂ. ಇಳಿಕೆ ಮಾಡಿದ ರಾಜ್ಯ ಸರ್ಕಾರ

ಕಲಬುರ್ಗಿ: 

      ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ರಾಜ್ಯಸರ್ಕಾರದ ವತಿಯಿಂದ ಪ್ರತಿ ಲೀಟರ್‌ಗೆ 2 ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಬೆಳಿಗ್ಗೆ ಇಲ್ಲಿ ಘೋಷಿಸಿದರು.

      ಕಲಬುರಗಿಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿರುವ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪೆಟ್ರೋಲ್ -ಡೀಸೆಲ್‌ ದರ ಇಳಿಕೆ ಪ್ರಕಟಿಸಿದರು. 

      ದೇಶದಲ್ಲಿ ಪೆಟ್ರೋಲ್‌ ಬೆಲೆ ಏರಿಕೆ ತೀವ್ರಗತಿ ತಲುಪಿದ್ದು, ರಾಜ್ಯದಲ್ಲಿ ಪೆಟ್ರೋಲ್‌ ಬೆಲೆ 84.39 ರೂ. ಆಗಿತ್ತು. ಪೆಟ್ರೋಲ್‌ಗೆ ಈಗಾಗಲೇ ರಾಜಸ್ಥಾನದಲ್ಲಿ ಎರಡು, ಆಂಧ್ರಪ್ರದೇಶದಲ್ಲಿ ಎರಡು, ಪಶ್ಚಿಮ ಬಂಗಾಳದಲ್ಲಿ ಒಂದು ರೂ. ಇಳಿಕೆಯಾಗಿದೆ. 
      ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಶಾಸಕರಾದ ಎಂ.ವೈ.ಪಾಟೀಲ, ಡಾ. ಅಜಯಸಿಂಗ್, ಕನ್ನೀಜ್ ಫಾತಿಮಾ, ಡಾ.ಉಮೇಶ ಜಾಧವ, ಬಿ.ಜಿ.ಪಾಟೀಲ, ಬಸವರಾಜ ಮತ್ತಿಮೂಡ, ದತ್ತಾತ್ರೇಯ ಪಾಟೀಲ ರೇವೂರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link