ಬೆಂಗಳೂರು;
ರಾಜ್ಯದಲ್ಲಿ ನವಂಬರ್ 3 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ 3 ಕ್ಷೇತ್ರಗಳಲ್ಲೂ ಅಂದರೆ, ಜಮಖಂಡಿ, ಬಳ್ಳಾರಿ ಮತ್ತು ಶಿವಮೊಗ್ಗ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ ಆಯ್ಕೆಯನ್ನು ,ನಾಳೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿಗೆ ಬರುವ ಸಾಧ್ಯತೆ ಇದ್ದು, ಬಂದ ನಂತರ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಮೈತ್ರಿ ಇರುವ ಕ್ಷೇತ್ರಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದ್ದು, ಈ ಕಾರಣದಿಂದಾಗಿ ಈ ಮೂರು ಕ್ಷೇತ್ರಗಳ ಉಸ್ತುವಾರಿಯನ್ನು ಒಬ್ಬೊಬ್ಬ ನಾಯಕರ ಹೆಗಲಿಗೆ ಹಾಕಲಾಗುವುದು, ಇದರಲ್ಲಿ ಜಮಖಂಡಿ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಬಳ್ಳಾರಿ ಕ್ಷೇತ್ರವನ್ನು ಡಿ.ಕೆ.ಶಿವಕುಮಾರ್, ಮತ್ತು ಶಿವಮೊಗ್ಗ ಕ್ಷೇತ್ರವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಹೆಗಲಿಗೆ ಹಾಕಲು ಕಾಂಗ್ರೆಸ್ ಚಿಂತನೆ ನಡೆಸಿದೆ..