ಉಪ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಗಳಿಲ್ಲ

0
39

ಬೆಂಗಳೂರು

      ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಗಳಿಲ್ಲ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜಿವ್ ಕುಮಾರ್ ತಿಳಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಳ್ಳಾರಿ, ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳು ತೆರವಾದ ಸಂದರ್ಭದಲ್ಲಿ ಲೋಕಸಭೆಯ ಅವಧಿ ಇನ್ನೂ ಒಂದು ವರ್ಷ ಇತ್ತು. ಹೀಗಾಗಿ ಕೇಂದ್ರ ಚುನಾವಣಾ ಆಯೋಗ ಪ್ರಜಾಪ್ರತಿನಿಧಿ ಕಾಯ್ದೆ 151ಎ ಅಡಿ ಚುನಾವಣೆ ಘೋಷಣೆ ಮಾಡಿದೆ. ಇದರಲ್ಲಿ ಯಾವುದೇ ದೋಷವಿಲ್ಲ. ಆದರೆ ಕೆಲ ರಾಜಕೀಯ ಪಕ್ಷಗಳು ಅನಗತ್ಯವಾಗಿ ಆರೋಪ ಮಾಡುತ್ತಿವೆ ಎಂದರು.

     ಆಂಧ್ರ ಪ್ರದೇಶದ ಲೋಕಸಭಾ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಲೋಕಸಭೆ ಅವಧಿ ಒಂದು ವರ್ಷಕ್ಕಿಂತ ಕಡಿಮೆ ಇತ್ತು. ಹೀಗಾಗಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ಪ್ರಕಟಿಸಿಲ್ಲ ಎಂದರು.

      ಈ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದು, ಚುನಾವಣೆ ಮುಂದೂಡುವಂತೆ ನ್ಯಾಯಪೀಠ ಆದೇಶಿಸಿದರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಯಿಸಿದ ಸಂಜೀವ್ ಕುಮಾರ್, ಚುನಾವಣಾ ವೇಳಾಪಟ್ಟಿ ಪ್ರಕಟವಾದ ನಂತರ ನ್ಯಾಯಾಲಯಗಳು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here