ಬೆಂಗಳೂರು
ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸೇರಿದ 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಅವರು ಎಲ್ಲಾ ಸಮಸ್ಯೆಗಳಿಂದ ಹೊರ ಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿರುವ ಅವರು ಅಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನನ್ನ ಮೇಲೆ ಶ್ರೀಮಂಜುನಾಥನ ಕೃಪೆಯಿದೆ. ನಾನು ಈ ಎಲ್ಲಾ ಸಮಸ್ಯೆಗಳಿಂದ ಪಾರಾಗಿ ಬರುತ್ತೇನೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ?ಈ ಹಿಂದೆ, ನನ್ನ ವಿರುದ್ಧ 124 ಆಸ್ತಿಗಳನ್ನು ಪಟ್ಟಿ ಮಾಡಿ ಅವುಗಳನ್ನು ಸಿಬಿಐ ಅಕ್ರಮವೆಂದು ಹೆಸರಿಸಿತ್ತು. ಅಲ್ಲದೆ ಅವುಗಳ ಮುಟ್ಟುಗೋಲಿಗಾಗಿ ಅನುಮತಿ ಕೋರಿ ಸಿಬಿಐ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಅವುಗಳಲ್ಲಿ 80 ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು ಎಂದು ಅವರು ಹೇಳಿದ್ದಾರೆ.
ಆಗ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ಆಸ್ತಿಗಳನ್ನು ಇತ್ತೀಚೆಗೆ ಮುಕ್ತಿಗೊಳಿಸಲಾಗಿದೆ. ಈಗ ಪುನಃ 77 ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಲಾಗಿದ್ದು, ಮುಂದೊಂದು ದಿನ ನಾನು ಈ ಪ್ರಕರಣದಲ್ಲಿ ನಿರ್ದೋಷಿ ಎಂದು ಸಾಬೀತಾದ ನಂತರ ಈ ಆಸ್ತಿಗಳನ್ನೂ ಸಿಬಿಐ ತನ್ನ ನಿರ್ಬಂಧದಿAದ ತೆರವು ಮಾಡುತ್ತದೆ ಎಂಬ ವಿಶ್ವಾಸವಿದೆ. ನನಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕೃಪಾಕಟಾಕ್ಷವಿದೆ. ದೇವರ ದಯೆಯಿಂದ ನನ್ನ ವಿರುದ್ಧದ ಪ್ರಕರಣಗಳಿಂದ ನಾನು ಮುಕ್ತನಾಗಿ ಹೊರಬರುತ್ತೇನೆಂಬ ವಿಶ್ವಾಸವಿದೆ?? ಎಂದು ಹೇಳಿದ್ದಾರೆ.
ಜನಾರ್ದನ ರೆಡ್ಡಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ), ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅವರಿಗೆ ಸೇರಿದ ನೂರಾರು ಕೋಟಿ ರೂ. ಮೌಲ್ಯದ ಸುಮಾರು 124 ಆಸ್ತಿಗಳನ್ನು ಪತ್ತೆ ಹಚ್ಚಿತ್ತು. ತನಿಖೆ ಚಾಲ್ತಿಯಲ್ಲಿರುವ ಹಿನ್ನೆಲೆಯಲ್ಲಿ ಆ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಅವಕಾಶ ಕಲ್ಪಿಸಬೇಕೆಂದು ಕೋರಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ಜೂ. 13 ರಂದು ಆದೇಶ ನೀಡಿ 124 ಆಸ್ತಿಗಳಲ್ಲಿ 77 ಆಸ್ತಿಯನ್ನು ಸದ್ಯಕ್ಕೆ ಜಪ್ತಿ ಮಾಡುವಂತೆ ಆದೇಶ ಕೊಟ್ಟಿದೆ.
ಇದೇ ಜನವರಿಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಇದೆ ಎನ್ನಲಾಗಿರುವ ಜನಾರ್ದನ ರೆಡ್ಡಿಯವರಿಗೆ ಸೇರಿದ ಒಟ್ಟು 124 ಆಸ್ತಿಗಳ ವಿವರಗಳನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಸಿಬಿಐ, ಆ ಎಲ್ಲಾ ಆಸ್ತಿಗಳು ಅಕ್ರಮ ಆದಾಯದಿಂದ ಖರೀದಿಸಿರುವ ಆಸ್ತಿಗಳೆಂಬ ಅನುಮಾನವಿದೆ. ಹಾಗಾಗಿ, ಪ್ರಕರಣದ ವಿಚಾರಣೆ ಮುಗಿಯುವವರೆಗೂ ಆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ನ್ಯಾಯಾಲಯವನ್ನು ಕೇಳಿತ್ತು. ಆಗ, ಪ್ರತಿಕ್ರಿಯೆ ನೀಡಿದ್ದ ರೆಡ್ಡಿ, ?ನನಗೆ ಒಟ್ಟು 4000 ಕೋಟಿ ರೂ.ಗಳಷ್ಟು ಆಸ್ತಿಯಿದೆ. ಆ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡರೂ ನನಗೆ ಯಾವುದೇ ಭಯವಿಲ್ಲ? ಎಂದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ