ನವದೆಹಲಿ:
ಒಡಿಶಾ ತ್ರಿವಳಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ತಿಳಿಸಿದೆ.
ಒಡಿಶಾದ ಕಟಕ್ ಜಿಲ್ಲೆಯ ಬಾಲಸೋರ್ ಜಿಆರ್‌ಪಿಎಸ್‌ನಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈಗಾಗಲೇ ಒಡಿಶಾದ ಬಾಲಸೋರ್‌ನಲ್ಲಿ ಸಿಬಿಐ ತಂಡವಿದೆ.
ರೈಲ್ವೆ ಸಚಿವ ವೈಷ್ಣವ್ ಅವರು ವಿರೋಧ ಪಕ್ಷಗಳಿಂದ ಟೀಕೆಗಳನ್ನು ಎದುರಿಸಿದರು. ರೈಲ್ವೆಯಲ್ಲಿನ ಲೋಪಗಳನ್ನು ಎತ್ತಿ ತೋರಿಸುವ ಹಲವಾರು ವರದಿಗಳು ಮತ್ತು ಲೆಕ್ಕಪರಿಶೋಧನೆಗಳನ್ನು ಉಲ್ಲೇಖಿಸಿ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿದವು.
ಒಡಿಶಾದ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ ಕೋರಮಂಡಲ್ ಎಕ್ಸ್‌ಪ್ರೆಸ್, ಎಸ್‌ಎಂವಿಪಿ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ 21 ಕೋಚ್‌ಗಳು ಡಿಕ್ಕಿ ಹೊಡೆದು ಮತ್ತು ಹಳಿತಪ್ಪಿದ ಭೀಕರ ದುರಂತಗಳಲ್ಲಿ ಕನಿಷ್ಠ 278 ಜನರು ಸಾವಿಗೀಡಾಗಿದ್ದಾರೆ ಮತ್ತು 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
