ಉಳ್ಳಾಲ : ಕೇಂದ್ರ ಸರ್ಕಾರದ ನೆರವಿನೊಂದಿಗೆ ರಾಜ್ಯ ಸರ್ಕಾರ ಕಡಲ ಕೊರೆತ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ದೀರ್ಘಕಾಲದ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಉಳ್ಳಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನಿರಂತರವಾಗಿ ಕಡಲ ಕೊರೆತ ಆಗುತ್ತಿದೆ. ಉಳ್ಳಾಲದಲ್ಲಿ ಕಳೆದ ಬಾರಿ ಸುಮಾರು 800 ಮೀ ಕಡಲ ಕೊರೆತ ಆಗಿತ್ತು. ಈ ಬಾರಿ 600 ಮೀ ಆಗಿದೆ. ಹೀಗಾಗಿ ಕಡಲ ಕೊರೆತ ಸಮಸ್ಯೆ ಶಾಶ್ವತ ಪರಿಹಾರ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದರು.
ಸಮುದ್ರದ ಅಲೆಗಳನ್ನು ತೆಡೆಯುವ ನಿಟ್ಟಿನಲ್ಲಿ ಸೀ ವೇವ್ ಬ್ರೇಕರ್ ಟೆಕ್ನಾಲಜಿಯನ್ನು ಇಲ್ಲಿ ಬಳಕೆ ಮಾಡಲು ತೀರ್ಮಾನ ಮಾಡಲಾಗಿದೆ. ಜನರಿಗೆ ಓಡಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಸರಿಯಾದ ಕೆಲಸ ಮಾಡುವ ಮೂಲಕ ಕಡಲ ಕೊರೆತ ಸಮಸ್ಯೆ ಶಾಶ್ವತ ಪರಿಹಾರಕ್ಕೆ ನಮ್ಮ
ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇವೆ ಎಂದರು..