ಕನಕ ಭವನ ಹಾಗೂ ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ:

ಬೆಂಗಳೂರು : ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್ ನಲ್ಲಿ ನೂತನವಾಗಿ ನಿರ್ಮಿಸಿರುವ “ಕನಕ ಭವನ” ಉದ್ಘಾಟನೆ ಮತ್ತು ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಶ್ರೀ ಕಾಗಿನೆಲೆ ಮಹಾ ಸಂಸ್ಥಾನದ ಪೀಠಾಧ್ಯಕ್ಷರು ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸ ದುರ್ಗ ಶಾಖಾ ಮಠದ ಪೀಠಾಧ್ಯಕ್ಷರು ಶ್ರೀ ಶ್ರೀ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ, ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಶ್ರೀ ವಿ.ಸೋಮಣ್ಣ ರವರು ನೆರವೇರಿಸಿದರು.

ಸದರಿ ಕಾರ್ಯಕ್ರಮದಲ್ಲಿ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ತೋಟಗಾರಿಕಾ ಸಚಿವರಾದ ಮುನಿರತ್ನ, ಮಾನ್ಯ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ), ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್, ದಕ್ಷಿಣ ಲೋಕಸಭಾ ಸಂಸದರಾದ ತೇಜಸ್ವಿ ಸೂರ್ಯ, ವಿಧಾನ ಪರಿಷತ್ ಶಾಸಕರಾದ ಅ.ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಮಾಜಿ ಸಚಿವರಾದ ಹೆಚ್.ಎಂ ರೇವಣ್ಣ, ಪಶ್ಚಿಮ ವಲಯ ಆಯುಕ್ತಾದ ದೀಪಕ್ ಹಾಗೂ ಇನ್ನಿತರೆ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link
Powered by Social Snap