ಕರ್ನಾಟಕದ ಬಜೆಟ್ – 2022

ಬೆಂಗಳೂರು:

2022-23ನೇ ಸಾಲಿನ ಹೊಸ ಘೋಷಣೆಗಳು: ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ:

• ‘ರೈತ ಶಕ್ತಿ’ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ; 600 ಕೋಟಿ ರೂ. ಅನುದಾನ.

• ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ. ಹಂಚಿಕೆ.

• ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ.

• ದ್ರಾಕ್ಷಿ ಬೆಳೆಯ ಸಂಗ್ರಹಣೆ, ಸಂಸ್ಕರಣೆÉ ಮತ್ತು ಸಾಗಾಣಿಕೆಗೆ ವಿಜಯಪುರ ಜಿಲ್ಲೆ, ತೊರವಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ವ್ಯವಸ್ಥೆ ಸ್ಥಾಪನೆ ಹಾಗೂ ಶೀತಲೀಕೃತ ಸರಕು ಸಾಗಣೆ ವಾಹನ ಪೂರೈಕೆ.

• ಬಡ್ಡಿ ರಿಯಾಯಿತಿ ಯೋಜನೆಯಡಿ 3 ಲಕ್ಷ ಹೊಸ ರೈತರೂ ಸೇರಿದಂತೆ 33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ.ಕೃಷಿ ಉತ್ಪಾದನೆ ಹೆಚ್ಚಳ ಹಾಗೂ ರೈತರ ಕ್ಷೇಮಾಭಿವೃದ್ಧಿ.

• ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕøತ ರೂಪದಲ್ಲಿ ಯಶಸ್ವಿನಿ ಯೋಜನೆ ಮರುಜಾರಿ. ರಾಜ್ಯ ಸರ್ಕಾರದಿಂದ 300 ಕೋಟಿ ರೂ. ಅನುದಾನ.

• 57 ತಾಲ್ಲೂಕುಗಳಲ್ಲಿ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ-2.0 ಜಾರಿ.

• ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆ, ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ.
ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ

• ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ

• ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ.ಗಳ ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ.

• ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ.

• ದ್ವಿತಳಿ ಬಿತ್ತನೆ ಗೂಡಿಗೆ ಪ್ರತಿ ಕೆಜಿಗೆ 50 ರೂ. ಪ್ರೋತ್ಸಾಹಧನ ಹೆಚ್ಚಳ; ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಪ್ರೋತ್ಸಾಹಧನ.

• ಮಂಡ್ಯ ಜಿಲ್ಲೆ, ಕೆ.ಆರ್. ಪೇಟೆಯಲ್ಲಿ ರೇಷ್ಮೆ ತರಬೇತಿ ಕೇಂದ್ರ.

ಪಶು ಸಂಗೋಪನೆ, ಹೈನುಗಾರಿಕೆಗೆ ಉತ್ತೇಜನ
• ನೂತನ 100 ಪಶುಚಿಕಿತ್ಸಾಲಯಗಳ ಪ್ರಾರಂಭ.

• ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ. ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಷೇರು ಬಂಡವಾಳ.

 ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆ 100ಕ್ಕೆ ಹೆಚ್ಚಳ;
50 ಕೋಟಿ ರೂ. ಅನುದಾನ.

• ಗೋಶಾಲೆಗಳಲ್ಲಿನ ಗೋವುಗಳ ದತ್ತು ಪ್ರೋತ್ಸಾಹಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ.

• ಹಾವೇರಿಯಲ್ಲಿ ಮೆಗಾಡೈರಿ ಸ್ಥಾಪನೆ; ಶಿವಮೊಗ್ಗ, ದಾವಣಗೆರೆ-ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ.

• ಆಕಸ್ಮಿಕ ಮರಣ ಹೊಂದುವ ಕುರಿ/ ಮೇಕೆ ಸಾಕಾಣಿಕೆದಾರರು/ ವಲಸೆ ಕುರಿಗಾರರ ಕುಟುಂಬಕ್ಕೆ 5 ಲಕ್ಷ ರೂ. ವಿಮಾ ಸೌಲಭ್ಯ.

• ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಸಂಯೋಜನೆಯೊಂದಿಗೆ 100 ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ‘ಮತ್ಸ್ಯ ಸಿರಿ’ ಯೋಜನೆ ಜಾರಿ.

ನೀರಾವರಿಗೆ ಆದ್ಯತೆ
• ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಮಾಡಲಾದ ಅನುದಾನ ಹಂಚಿಕೆ:

ಅ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 – 5,000 ಕೋಟಿ ರೂ.

ಆ. ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ- 1,000 ಕೋಟಿ ರೂ.

ಇ. ಭದ್ರಾ ಮೇಲ್ದಂಡೆ ಯೋಜನೆ- 3,000 ಕೋಟಿ ರೂ.

ಈ. ಎತ್ತಿನಹೊಳೆ ಯೋಜನೆ – 3,000 ಕೋಟಿ ರೂ. ಅನುದಾನ.

ಉ. ಮೇಕೆದಾಟು ಯೋಜನೆ- 1,000 ಕೋಟಿ ರೂ. ಅನುದಾನ.

• ತುಂಗಭದ್ರಾ ಜಲಾಶಯದ ನೀರು ಸಂಗ್ರಹಣೆ ಕೊರತೆ ಸರಿದೂಗಿಸಲು ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ 1,000 ಕೋಟಿ ರೂ. ಅನುದಾನ.

• ಕೇಂದ್ರ ಸರ್ಕಾರವು PಒಏSಙ-ಂIಃP ಅಡಿಯಲ್ಲಿ ಸನ್ನತಿ ಏತ ನೀರಾವರಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1 ಮತ್ತು 2ರಲ್ಲಿನ ಬೂದಿಹಾಳ ಪೀರಾಪುರ, ನಂದವಾಡಗಿ, ನಾರಾಯಣಪುರ ಬಲದಂಡೆ (9ಎ) ಕಾಲುವೆ ವಿಸ್ತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ.

• ಪ್ರಗತಿಯಲ್ಲಿರುವ 14 ನೀರಾವರಿ ಯೋಜನೆ ಪೂರ್ಣಗೊಳಿಸಿ, 35,319 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ.

• 2021-22ನೇ ಸಾಲಿನಲ್ಲಿ ಅನುಮೋದಿಸಿದ 8,774 ಕೋಟಿ ರೂ.ಗಳ ಹೊಸ ನೀರಾವರಿ ಯೋಜನೆಗಳಿಗೆ ರೂಪುರೇಷೆ ಸಿದ್ಧಪಡಿಸಲು ಕ್ರಮ.

• ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರು ತಡೆಗಟ್ಟಲು ಖಾರ್‍ಲ್ಯಾಂಡ್ ಯೋಜನೆ ಅನುಷ್ಠಾನ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಅನುಷ್ಠಾನ.

• ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ. ಕ್ರಿಯಾ ಯೋಜನೆ. ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಅನುದಾನ.

• ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು, ಉತ್ತರ ಕರ್ನಾಟಕದ

5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ.
ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿ

• ವಿವಿಧ ಅಭಿವೃದ್ಧಿ ಸೂಚಕಗಳಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಒಟ್ಟು 3,000 ಕೋಟಿ ರೂ. ಅನುದಾನ. 93 ತಾಲ್ಲೂಕುಗಳಲ್ಲಿ ಶಿಕ್ಷಣ ಗುಣಮಟ್ಟ ವೃದ್ಧಿ, 100 ತಾಲ್ಲೂಕುಗಳಲ್ಲಿ ಆರೋಗ್ಯ ಸೇವೆ ಬಲಪಡಿಸಲು ಮತ್ತು 102 ತಾಲ್ಲೂಕುಗಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ.

ಅ. ಎರಡು ವರ್ಷಗಳಲ್ಲಿ 100 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ 25 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ತಲಾ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ; 1,000 ಕೋಟಿ ರೂ. ಅನುದಾನ.

ಆ. ಲೋಕೋಪಯೋಗಿ ಇಲಾಖೆ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಯೋಜನೆಯಡಿ ಒದಗಿಸಿದ ಅನುದಾನದಿಂದ 750 ಕೋಟಿ ರೂ. ವೆಚ್ಚದಲ್ಲಿ 100 ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯ ಹಾಗೂ 10 ಕ್ರೈಸ್ ವಸತಿ ಶಾಲೆಗಳ ಕಟ್ಟಡಗಳ ನಿರ್ಮಾಣ.

ಇ. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯೊಂದಿಗೆ ಸಂಯೋಜಿಸಿ 1,000 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ.

ಈ. 165 ಕೋಟಿ ರೂ. ವೆಚ್ಚದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಹಿಂದುಳಿದ ವರ್ಗಗಳ 50 “ಕನಕದಾಸ” ವಿದ್ಯಾರ್ಥಿನಿಲಯಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಾಣ.

ಉ. ಅಪೌಷ್ಟಿಕತೆ ನಿವಾರಣೆಗೆ, ಸೃಷ್ಟಿ ಮತ್ತು ಕ್ಷೀರಭಾಗ್ಯ ಯೋಜನೆಯ ಸೌಲಭ್ಯ ಸಾಧಾರಣ ಅಪೌಷ್ಟಿಕ ಮಕ್ಕಳಿಗೂ ವಿಸ್ತರಣೆ.

ಊ. 37 ಪೌಷ್ಟಿಕ ಪುನರ್ವಸತಿ ಕೇಂದ್ರಗಳ ಸ್ಥಾಪನೆ.

ಗುಣಮಟ್ಟದ ಶಿಕ್ಷಣ

• ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.

• ಹೋಬಳಿ ಮಟ್ಟದಲ್ಲಿ “ಮಾದರಿ ಶಾಲೆ”ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ.

• ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.

• ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.

• ‘ನೋಡಿ ಕಲಿ ಮಾಡಿ ತಿಳಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ.

• Karnataka Institute of Technology ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ; ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ.

• ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ.

 ಎಲ್ಲರಿಗೂ ಆರೋಗ್ಯ; ಎಲ್ಲೆಡೆಯೂ ಆರೋಗ್ಯ:
• ಬೆಂಗಳೂರಿನ ಎಲ್ಲಾ ವಾರ್ಡ್‍ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 “ನಮ್ಮ ಕ್ಲಿನಿಕ್”ಗಳ ಸ್ಥಾಪನೆ.

• ರಾಜ್ಯದಲ್ಲಿ ಮಹಿಳಾ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ.

• ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ.

• ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ.

• ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ.

• ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ Iಟಿಜಿusioಟಿ ಅeಟಿಣಡಿe ಗಳನ್ನು ಸ್ಥಾಪಿಸಲಾಗುವುದು.

• ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.

• ತುಮಕೂರಿನÀಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ; 2022-23ರಲ್ಲಿ 10 ಕೋಟಿ ರೂ. ಅನುದಾನ.

• ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 75 ತಾಲ್ಲೂಕು ಆಸ್ಪತ್ರೆಗಳ ಮ್ಯಾಪಿಂಗ್, ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ.

• ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‍ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹೆಚ್ಚು ಹಾಸಿಗೆಗಳ ಸಾಮಥ್ರ್ಯವಿರುವ ಸರ್ಕಾರಿ ಆಸ್ಪತ್ರೆಗಳನ್ನು ಎನ್.ಎಂ.ಸಿ.ಯ ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ; ಈ ವರ್ಷ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭ.

• “ಮುಖ್ಯಮಂತ್ರಿ ಆರೋಗ್ಯ ವಾಹಿನಿ” ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭ.

• ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.

• ಬಡವರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ಒದಗಿಸಲು ಕೈಗೊಳ್ಳುವ ಕ್ರಮಗಳು:
ಅ. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ.

ಆ. ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು.

ಇ. ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ

ಅಪೌಷ್ಟಿಕತೆ ನಿವಾರಣೆಗೆ ಒತ್ತು
• ಪೌಷ್ಟಿಕ ಕರ್ನಾಟಕÀ ಯೋಜನೆಯಡಿ 93 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ.

• ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆಬಿಡುವುದನ್ನು ತಪ್ಪಿಸಿ, ಅಪೌಷ್ಟಿಕತೆ ನಿವಾರಿಸುವ “ಸ್ಫೂರ್ತಿ” ಯೋಜನೆ ರಾಜ್ಯಾದ್ಯಂತ ವಿಸ್ತರಣೆ.

ದುರ್ಬಲ ವರ್ಗಗಳ ಸಬಲೀಕರಣ
• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ 800 ಕೋಟಿ ರೂ.

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮಥ್ರ್ಯದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.

• ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ; ಪದವಿ ಪೂರ್ವ ತರಗತಿ ಪ್ರಾರಂಭ; ಸಿಬಿಎಸ್‍ಇ ಮಾನ್ಯತೆ ಪಡೆಯಲು ಕ್ರಮ. 25 ಕೋಟಿ ರೂ. ಅನುದಾನ.

• ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ.

• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು.

• ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆ; ಬೋರ್ ವೆಲ್ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ; ವಿದ್ಯುದೀಕರಣ ಶುಲ್ಕ ಸರ್ಕಾರದಿಂದ ಪಾವತಿ. 2022-23ರಲ್ಲಿ ಒಟ್ಟಾರೆ
1,115 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.

• ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳಡಿ 400 ಕೋಟಿ ರೂ. ಅಭಿವೃದ್ಧಿ ಯೋಜನೆ. ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂ. ಯೋಜನೆ

• ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ ರೂ. ಯೋಜನೆ.

• ಮರಾಠಾ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ 50 ಕೋಟಿ ರೂ.

• ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 50 ಕೋಟಿ ರೂ. ಯೋಜನೆ ಹಾಗೂ ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ ರೂ. ಯೋಜನೆ.

ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ:
• ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ. 3.9 ಲಕ್ಷ ಮಹಿಳೆಯರಿಗೆ ಅನುಕೂಲ.

• ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ.

• ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು “ಅಸ್ಮಿತೆ” ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ; ಹೋಬಳಿ/ ಜಿಲ್ಲೆ/ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ.

• ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರುನÀಲ್ಲಿ ಸೀರೆ ಮೈಕ್ರೋಕ್ಲಸ್ಟರ್ ಅಭಿವೃದ್ಧಿ.

 ಕಾರ್ಮಿಕರ ಕ್ಷೇಮಾಭಿವೃದ್ಧಿ
• 2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2610 ಕೋಟಿ ರೂ. ಗಳ ಯೋಜನೆಗಳ ಅನುಷ್ಠಾನ.
• ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಪ್ರಾರಂಭ
• ಕಟ್ಟಡ ಕಾರ್ಮಿಕರ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
• ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆಗಳ ಸಾಮಥ್ರ್ಯ 100ಕ್ಕೆ ಹೆಚ್ಚಳ; 19 ಹೊಸ ಚಿಕಿತ್ಸಾಲಯಗಳ ಪ್ರಾರಂಭ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap