ಕಾಂಗ್ರೆಸ್‌ ಗೆಲುವಿಗೆ ನಮ್ಮೊ(ಬಿಜೆಪಿ) ಳಗಿನ ದೇಶದ್ರೋಹಿಗಳೆ ಕಾರಣ : ರಮೇಶ್‌ ಜಾರಕೀಹೊಳಿ

ಬೆಳಗಾವಿ:

     ಬಿಜೆಪಿಯೊಳಗಿನ ದೇಶದ್ರೋಹಿಗಳ ಕುತಂತ್ರ ಕಾಂಗ್ರೆಸ್‌ಗೆ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ತಂದುಕೊಟ್ಟಿದೆ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದ್ದಾರೆ. 

     ಶನಿವಾರ ಸಂಜೆ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಹಲವು ಮುಖಂಡರು ಪರೋಕ್ಷವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದು, ಇದು ಬೆಳಗಾವಿ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಯಿತು ಎಂದು ದೂರಿದರು.

      ಕಾಂಗ್ರೆಸ್‌ನ ಚುನಾವಣಾ ಪೂರ್ವ ಗ್ಯಾರಂಟಿಗಳು ಮತ್ತು ಮೀಸಲಾತಿ ನೀತಿಯ ಮೇಲಿನ ನಿಲುವು ಚುನಾವಣೆಯಲ್ಲಿ ಆ ಪಕ್ಷವನ್ನು ಗೆಲ್ಲಲು ಸಹಾಯ ಮಾಡಿದೆ. ಆದರೆ, ಈ ಮಹಾ ಗೆಲುವು ಕಾಂಗ್ರೆಸ್‌ಗೆ ಆಶ್ಚರ್ಯ ಉಂಟುಮಾಡಿದೆ. ಆದರೆ, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಗ್ಯಾರಂಟಿಗಳು ಕೊನೆಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ