ಕಾವೇರಿ ನದಿ ನೀರು: ತ.ನಾ ವರ್ತನೆಗೆ ಕೇಂದ್ರ ಕಾರಣ : ಚಲುವರಾಯಸ್ವಾಮಿ

ಬೆಂಗಳೂರು:

     ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಬೇಡಿಕೆಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. 

     ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣೆಕಟ್ಟುಗಳಲ್ಲಿನ ಪ್ರಸ್ತುತ ನೀರಿನ ಮಟ್ಟ, ತಮಿಳುನಾಡಿಗೆ ಇದುವರೆಗೆ ಬಿಡುಗಡೆಯಾದ ನೀರಿನ ಪ್ರಮಾಣ ಮತ್ತು ಇತರ ವಿವರಗಳನ್ನು ಕೇಂದ್ರ ಸರ್ಕಾರಕ್ಕೆ ವಿವರಿಸಿದ್ದೇವೆ ಎಂದರು.

    ‘ಮಳೆ ಕಡಿಮೆಯಾಗಿದೆ ಮತ್ತು ಅಣೆಕಟ್ಟುಗಳಿಗೆ ಒಳಹರಿವು ಕಡಿಮೆಯಾಗಿದೆ. ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಹೀಗಾಗಿ ಕಾನೂನಾತ್ಮಕವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

    ಕಾವೇರಿ, ಕಬಿನಿ, ಹಾರಂಗಿ ಮತ್ತು ಹೇಮಾವತಿ ಜಲಾನಯನ ಪ್ರದೇಶದ ರೈತರ ಹಿತಕಾಯಲು ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ ಅವರು, ತಾವು ಎದುರಿಸುತ್ತಿರುವ ಭ್ರಷ್ಟಾಚಾರ ಆರೋಪಗಳ ಕುರಿತು ಸಿಐಡಿ ತನಿಖೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸೋಣ ಎಂದು ಸಚಿವರು ಹೇಳಿದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ