ಬೆಂಗಳೂರು
ಕಾವೇರಿ ನದಿನೀರು ಹಂಚಿಕೆ ವಿವಾದ ,ಕೇಂದ್ರ ಸರ್ಕಾರದ ಮುಂದೆ ಬಾಕಿಯಿರುವ ರಾಜ್ಯದ ಯೋಜನೆಗಳು ಹಾಗೂ ಬರಪರಿಹಾರ ವಿಷಯಗಳಿಗೆ ಸಂಬAಧಿಸಿದAತೆ ಚರ್ಚಿಸಲು ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ ನಲ್ಲಿ ಬುಧವಾರ ಬೆಳಗ್ಗೆ ಮಹತ್ವದ ಸಭೆ ಆಯೋಜಿಸಲಾಗಿದೆ. ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು ,ಲೋಕಸಭಾ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರುಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ .
ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಕರ್ನಾಟಕದ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೊಡಿದ್ದು ನಾಳೆ ನಡೆಯಲಿರುವ ಮಹತ್ವದ ಸಭೆಗೆ ಕರ್ನಾಟಕ ಭವನದಲ್ಲಿ ಪೂರ್ವಭಾವಿ ಚರ್ಚೆ ಮಾಡುತ್ತಿದ್ದಾರೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ