ನವದೆಹಲಿ:
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಟ್ವಿಸ್ಟ್ ದೊರೆತಿದ್ದು, ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಇದೀಗ ಯೂಟರ್ನ್ ಹೊಡೆದಿದ್ದು, WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ತನ್ನ ಮಗಳು ಬಗ್ಗೆ ಬ್ರಿಜ್ ಭೂಷಣ್ ‘ಷ್ಪಕ್ಷಪಾತವಾಗಿ’ ವರ್ತಿಸಿದ ನಂತರ ಮುಖ್ಯಸ್ಥನ ವಿರುದ್ಧ ಕಿರುಕುಳ ಆರೋಪ ಹೊರಿಸಲಾಯಿತು ಎಂದು ಅಪ್ರಾಪ್ತೆ ತಂದೆ ಹೇಳಿದ್ದಾರೆ.’2022 ರ ಏಷ್ಯನ್ ಚಾಂಪಿಯನ್‌ಶಿಪ್‌ನ ಅಂತಿಮ ಟ್ರಯಲ್ಸ್‌ಗೆ ತನ್ನ ಮಗಳು ಅರ್ಹತೆ ಪಡೆಯಲು ವಿಫಲವಾದ ನಂತರ ಬ್ರಿಜ್ ಭೂಷಣ್ ವಿರುದ್ಧ ಕೋಪಗೊಂಡಿದ್ದೆ ಎಂದು ಹೇಳಿ್ದಾರೆ.
ಬುಧವಾರದಂದು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಜೂನ್ 15 ರೊಳಗೆ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ ನಂತರ ಕುಸ್ತಿಪಟುಗಳು ತಮ್ಮ ಆಂದೋಲನವನ್ನು ಹಿಂಪಡೆದುಕೊಳ್ಳಲು ಒಪ್ಪಿಕೊಂಡರು. “ನಾವು ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ಅತ್ಯಂತ ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ. ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಅದರಂತೆ ಜೂನ್ 15 ರೊಳಗೆ ಚಾರ್ಜ್‌ಶೀಟ್ ಸಲ್ಲಿಸಬೇಕು. ಈ ಬೇಡಿಕೆಯನ್ನು ಒಮ್ಮತದಿಂದ ಒಪ್ಪಲಾಯಿತು ಎಂದು ಠಾಕೂರ್ ಹೇಳಿದ್ದಾರೆ.
