ಶಿವಮೊಗ್ಗ:
ಬೆಳಗಾವಿ ಪಿ.ಎಲ್‍ಡಿ.ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆದೇಶ ನೀಡಿದ್ದರೂ ಕೂಡಾ ಆ ಆದೇಶವನ್ನು ಗಾಳಿಗೆ ತೂರಿ ಕಾಲುಕಸ ಮಾಡಿಕೊಂಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ಶಿವಮೊಗ್ಗದಲ್ಲಿ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ. ಇದರಿಂದಾಗಿ ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷವಾಗಿ ಕೆಲಸ ಮಾಡಿದರೆ ಒಳಿತು. ಕಾಂಗ್ರೆಸ್‍ನಲ್ಲಿ ಒಬ್ಬರಿಗೊಬ್ಬರು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ