ಕೇರಳ ಸಿಎಂ ಪುತ್ರಿ ವಿರುದ್ಧ ಪ್ರಕರಣ ದಾಖಲಿಸಿದ ಇಡಿ…..!

ಕೊಚ್ಚಿ:

    ಖಾಸಗಿ ಸಂಸ್ಥೆಯೊಂದರಿಂದ ಅಕ್ರಮವಾಗಿ ಹಣ ಪಡೆದಿರುವ ಆರೋಪದ ಮೇಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್, ಅವರ ಐಟಿ ಕಂಪನಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. 

    ತನಿಖಾ ಸಂಸ್ಥೆಯು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸಂಬಂಧಪಟ್ಟವರಿಗೆ ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ಕಚೇರಿ (ಎಸ್‌ಎಫ್‌ಐಒ) ಸಲ್ಲಿಸಿದ ದೂರಿನ ಅನ್ವಯ ಇ.ಡಿ ಪ್ರಕರಣ ದಾಖಲಿಸಿದೆ ಎಂದು ತಿಳಿಸಿವೆ.

    ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಎಂಬ ಖಾಸಗಿ ಕಂಪನಿಯು 2018 ರಿಂದ 2019ರ ಅವಧಿಯಲ್ಲಿ ವೀಣಾ ಅವರ ಕಂಪನಿಯಾದ ಎಕ್ಸಾಲಾಜಿಕ್ ಸೊಲ್ಯೂಷನ್ಸ್‌ಗೆ 1.72 ಕೋಟಿ ರೂ.ಗಳನ್ನು ಅಕ್ರಮವಾಗಿ ಪಾವತಿಸಿದೆ. ಆ ಕಂಪನಿಯು ವೀಣಾ ಅವರ ಕಂಪನಿಯಿಂದ ಯಾವುದೇ ಸೇವೆ ಪಡೆದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಆರೋಪಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇ.ಡಿ ಪ್ರಕರಣ ದಾಖಲಿಸಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap