ಕೋಲಾರ:
ಮೆಡಿಕಲ್ ಕಾಲೇಜೊಂದರಲ್ಲಿ ಉಚಿತ ಸೀಟ್ ಗಿಟ್ಟಿಸಿಕೊಂಡಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದರ್ಶಿನಿ ಎಂದು ಗುರುತಿಸಲಾಗಿದೆ.
ದರ್ಶಿನಿಯವರು ಎರಡು ವರ್ಷಗಳ ಹಿಂದೆಯಷ್ಟೆ ತಂದೆಯನ್ನು ಕಳೆದುಕೊಂಡಿದ್ದರು. ರ್ಯಾಂಕ್ ಗಳಿಸಿರುವ ಈಕೆ ಉಚಿತ ಕೋಟಾದಡಿ ಮೆಡಿಕಲ್ ಸೀಟ್ ಗಿಟ್ಟಿಸಿಕೊಂಡಿದ್ದಳು. ಇದೀಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಬಂಧಿಕರು ಕಾಲೇಜು ಆಡಳಿತ ಮಂಡಳಿಯ ಮೇಲೆ ಕಿರುಕುಳದ ಆರೋಪವನ್ನು ಹೊರಿಸಿದ್ದಾರೆ. ಈ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯರು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೃತ ದರ್ಶನಿಯ ಸಂಬಂಧಿಕರಾದ ಶ್ರೀನಿವಾಸ್ ಹಾಗೂ ಹನುಮಂತಪ್ಪ ಆರೋಪ ಮಾಡಿದ್ದಾರೆ. ಆದರೆ ಇದುವರೆಗೂ ಕಾಲೇಜು ಆಡಳಿತ ಮಂಡಳಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.
