ಗುಬ್ಬಿ
ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮೂಡಿಸುವುದರ ಜೊತೆಗೆ ಶೈಕ್ಷಣಿಕ ಪ್ರಗತಿಗೂ ಹೆಚ್ಚು ಸಹಕಾರಿಯಾಗಲಿವೆ ಎಂದು ಬೆಟ್ಟದಹಳ್ಳ ಗವಿಮಠದ ಶ್ರೀಚಂದ್ರಶೇಖರಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಬಾಗೂರು ಗೇಟ್‍ನ ಗುರುಶ್ರೀ ಆಂಗ್ಲ ಮಾಧ್ಯಮ ಸಂಯುಕ್ತ ಪ್ರೌಢಶಾಲೆ ಮೈದಾನದಲ್ಲಿ ಏರ್ಪಡಿಸಿದ್ದ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ಮಕ್ಕಳಲ್ಲಿ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪರಿಣಾಮಕಾರಿಯಾಗಲಿದ್ದು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಉತ್ತಮ ಕ್ರೀಡಾಪಟುಗಳಾಗುವಂತೆ ಕರೆನೀಡಿದರು.
ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ:ನವ್ಯಬಾಬು ಮಾತನಾಡಿ ಮಕ್ಕಳಿಗೆ ಕ್ರೀಡೆಗಳು ಸ್ಪೂರ್ತಿದಾಯಕವಾಗಲಿದ್ದು ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ವಹಿಸಿ ಆಟವಾಡಿದಾಗ ಮಾತ್ರ ಗೆಲವು ಪಡೆಯಲು ಸಾಧ್ಯವಾಗುತ್ತದೆ. ಇಲ್ಲಿ ಕಠಿಣ ಅಭ್ಯಾಸಮಾಡಿದರೆ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಸದಸ್ಯೆ ಮಮತಾಯೋಗೀಶ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಅಶ್ವಥಪ್ಪ, ಗುರುಶ್ರೀ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಸುರೇಶ್, ಸಿ.ಆರ್.ಪಿ ಕೆಂಪಯ್ಯ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.