ಕ್ಷುಲ್ಲಕ ಕಾರಣಕ್ಕೆ ಜಗಳ: ಕೊಲೆಯಲ್ಲಿ ಅಂತ್ಯ

ತುಮಕೂರು 

     ಹಬ್ಬದ ಸಂಭ್ರಮದಲ್ಲಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಯುವಕನೊಬ್ಬನ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ತುಮಕೂರು ನಗರ ಹೊರವಲಯದ ಭೀಮಸಂದ್ರ ಬಳಿಯ ಬೆತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಲ್ಲಿ ಮೃತಪಟ್ಟ ಯುವಕನನ್ನ ಕಂಟ್ರ್ಯಾಕ್ಟರ್‌ನಿರಂಜನ್ (೩೦) ಎಂದು ಗುರುತಿಸಲಾಗಿದೆ.

    ಇನ್ನು ಯುವಕರ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ನಿರಂಜನ್ಗೆ ಕೆಲವರು ಡ್ರ್ಯಾಗರ್ನಿಂದ ಚುಚ್ಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ ತೀವ್ರವಾಗಿ ಗಾಯಗೊಂಡ ನಿರಂಜನ್ ನನ್ನು ಸ್ಥಳೀಯರು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟ ನಿರಂಜನ್.

    ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಇನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ರವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಇನ್ನು ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದು ಕೊಲೆ ಮಾಡಿರುವ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap