ಅಹಮಬಾದ್:
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯದಲ್ಲಿ ದಶಕಗಳ ಕಾಲ ಪ್ರಾಬಲ್ಯ ಮೆರೆದಿದ್ದ ಬಿಜೆಪಿ ಗೆಲುವಿನ ಓಟಕ್ಕೆ ಕಾಂಗ್ರೆಸ್ ಅಂಕುಶಹಾಕಿದ್ದು, ಕೊನೆಗೂ ಖಾತೆ ತೆರೆದಿದೆ. ಬನಸ್ಕಾಂತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆನಿಬೆನ್ ಠಾಕೂರ್ 20,00 ಮತಗಳ ಅಂತರದಿಂದ ತಮ್ಮ ಸಮೀಪದ ಬಿಜೆಪಿ ಅಭ್ಯರ್ಥಿ ರೇಣುಕಾ ಚೌಧರಿ ಅವರನ್ನು ಸೋಲಿಸಿದ್ದಾರೆ.
ಆರಂಭದ ಸುತ್ತಿನಿಂದಲೂ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರಾ ನೇರ ಪೈಪೋಟಿ ನಡೆಯಿತು. ಅಂತಿಮವಾಗಿ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಕ್ಷೇತ್ರದೊಂದಿಗೆ ನಿರಂತರ ಸಂಪರ್ಕ, ಕ್ರೌಡ್ ಫಂಡಿಂಗ್ ಮತ್ತಿತರ ಕಾರ್ಯಕ್ರಮಗಳು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಮಾಡಿವೆ.
ಈ ಮಧ್ಯೆ ಗುಜರಾತಿನ 26 ಕ್ಷೇತ್ರಗಳ ಪೈಕಿ 25ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಗಾಂಧಿನಗರದಲ್ಲಿ ಅಮಿತ್ ಶಾ 6 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದರೆ, ನವಸಾರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್. ಪಾಟೀಲ್ ನಾಲ್ಕು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪೊರ್ ಬಂದರ್ ಕ್ಷೇತ್ರದಿಂದ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ಜಯ ಗಳಿಸಿದ್ದಾರೆ.