ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ…!

ಬೆಂಗಳೂರು

     ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಿದ 5 ಗ್ಯಾರಂಟಿಗಳಲ್ಲಿ ‘ಗೃಹ ಜ್ಯೋತಿ’ ಸಹ ಒಂದು. ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ ಗಳವರೆಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತದೆ. ಈ ಯೋಜನೆ ಫಲಾನುಭವಿಗಳಾಗಲು ಜೂನ್ 15 ರಿಂದ ಅರ್ಜಿ ಸಲ್ಲಿಸಬೇಕಿತ್ತು.

    ಗೃಹಜ್ಯೋತಿ ಯೋಜನೆ ಫಲಾನುವಿಯಾಗಲು ಜನರು ಅಗತ್ಯ ದಾಖಲೆಗಳ ಜೊತೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡುವ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಜೂನ್ 18ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

      ‘ಗೃಹ ಜ್ಯೋತಿ’ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದ್ಯುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸಂಪುಟ ಸಭೆಯು ಅನುಮೋದಿಸಿತ್ತು.

    ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಸಹಾಯಧನ ಮೊತ್ತವನ್ನು ಹಾಗೂ ಮುಂದಿನ ಮಾಹೆಗಳಲ್ಲಿ ನಿಗದಿಯಾಗುವ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕೆ ಶುಲ್ಕ ದರಕ್ಕೆ ಸಂಬಂಧಿಸಿದ ಸಹಾಯಧನವನ್ನು ಒಳಗೊಂಡಂತೆ ಒಟ್ಟು ಸಹಾಯಧನವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರದಿಂದ ಮುಂಗಡವಾಗಿ ಒದಗಿಸಲಾಗುವುದು ಎಂದು ಸರ್ಕಾರ ಹೇಳಿತ್ತು.

    ಬಿಜೆಪಿಯಿಂದ ಹಣ ಪಡೆದ ಮುಸ್ಲಿಮರು ಕಾಂಗ್ರೆಸ್‌ಗೆ ಮತ ಹಾಕಿದರು: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿವಾದ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯಡಿಯ ಫಲಾನುಭವಿಗಳನ್ನು ಗೃಹಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದು ಸರ್ಕಾರ ಹೇಳಿತ್ತು ಮತ್ತು ಯೋಜನೆಯ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು.

    ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಷರತ್ತುಗಳೊಂದಿಗೆ ಜಾರಿಗೆ ತರಲು ಆದೇಶ ನೀಡಲಾಗಿದೆ. ಆದರೆ ಗ್ರಾಹಕರು ಈ ಹಿಂದೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಪಾವತಿ ಮಾಡಬೇಕಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap