ಬೆಂಗಳೂರು:
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಹು ಪ್ರಸಿದ್ದವಾಗಿದ್ದ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ.
ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆಯಪ್ ಸಿದ್ಧಪಡಿಸಲಾಗಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅರ್ಜಿ ಸಲ್ಲಿಕೆಯ ದಿನಾಂಕ ನಿಗದಿಪಡಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಯಾವಾಗಿನಿಂದ ಜಾರಿಗೊಳಿಸಬೇಕು. ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಗೊಳಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ