ಮೈಸೂರು:
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ ಅವರು, ಎಮ್ಮೆ, ಕೋಣಗಳನ್ನು ಕಡಿಯಬಹುದಾದರೇ ಹಸು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸುವುದಾಗಿ ಹೇಳಿದ ಅವರು ಗೋಶಾಲೆಗಳನ್ನು ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ ಎಂದರು.
