ಗ್ಯಾರಂಟಿಗಳ ‘ಅಡ್ಡ ಪರಿಣಾಮ’ ಜನರಿಗೆ ತಟ್ಟುತ್ತಿದೆ : ಕುಮಾರ ಸ್ವಾಮಿ

ಬೆಂಗಳೂರು: 

         ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ .ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

      ಖಾಸಗಿ ಸಾರಿಗೆ ಒಕ್ಕೂಟಗಳಿಂದ ಬೆಂಗಳೂರು ಬಂದ್ ಕುರಿತು ಎಕ್ಸ್ ನಲ್ಲಿ ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ. ಈ ಬಂದ್ ನಿಂದ ಸರಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ ಎಂದು ಆರೋಪಿಸಿದ್ದಾರೆ.

      ಸರ್ಕಾರ ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು. ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ.ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕರೆದು ಮಾತನಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap