ಚಾಮರಾಜನಗರ : ಎಲಚೆಟ್ಟಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಚಾಮರಾಜನಗರ

      ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಿಕ್ಕ ಎಲಚೆಟ್ಟಿ ಗ್ರಾಮಸ್ಥರು ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದಾರೆ.

     ಯಾವ ಜನಪ್ರತಿನಿಧಿಗಳು ಕೂಡ ನಮಗೆ ಮೂಲಸೌಕರ್ಯಗಳನ್ನು ಒದಗಿಸಿಲ್ಲ ಎಂದು ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕ ಎಲಚೆಟ್ಟಿ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದಾರೆ.

   ಇದು ಕಾಡಂಚಿನ ಪ್ರದೇಶ ಆಗಿದ್ದು, ಇಲ್ಲಿ ಮೂಲಭೂತ ಸೌಕರ್ಯ ಹಾಗೂ ರಸ್ತೆ ನಿರ್ಮಾಣ ಮಾಡಿಸಿದಿರುವ ಹಿನ್ನೆಲೆ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಮೂಲಸೌಕರ್ಯಗಳನ್ನು ಒದಗಿಸುವವರೆಗೂ ನಾವು ಮತದಾನಕ್ಕೆ ಬರುವುದಿಲ್ಲ ಎಂದು ಚಿಕ್ಕ ಎಲಚೆಟ್ಟಿ ಗ್ರಾಮದ 101 ಮತದಾರರು ಪಟ್ಟು ಹಿಡಿದಿದ್ದಾರೆ.

    ವಿ.ಸೋಮಣ್ಣ ದಂಪತಿ ಮತದಾನ ಮತ್ತೊಂದೆಡೆ ಚಾಮರಾಜನಗರದಲ್ಲಿ ಮೊದಲ ಬಾರಿ ದಂಪತಿ ಸಮೇತ ಆಗಮಿಸಿ ಸಚಿವ ವಿ.ಸೋಮಣ್ಣ ಅವರು ಮತದಾನ ಮಾಡಿದರು. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಮುದ್ರೆ ಒತ್ತುವ ದಿನ ಇದು: ಡಿ.ಕೆ.ಶಿವಕುಮಾರ್‌ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ.ಸೋಮಣ್ಣ ಅವರು, ನಗರದ ಪೇಟೆ ಪ್ರೈಮರಿ ಶಾಲೆಯ ಬೂತ್ ನಂ 74ರಲ್ಲಿ ಮತದಾ‌ನ ಮಾಡಿದರು. 9:30ಕ್ಕೆ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ವಿ.ಸೋಮಣ್ಣ ಸರದಿ‌ ಸಾಲಿನಲ್ಲಿ ನಿಂತು ಮತ ಚಲಾವಣೆ ‌ಮಾಡಿ ಗಮನ ಸೆಳೆದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap