ಚಿಕ್ಕಬಳ್ಳಾಪುರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದ ಸಚಿವ ಎಂಟಿಬಿ ಎನ್.ನಾಗರಾಜು

ಚಿಕ್ಕಬಳ್ಳಾಪುರ: 8 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲೆಯ ನಂದಿಯ ಇತಿಹಾಸ ಪ್ರಸಿದ್ಧ ಭೋಗನಂದೀಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು ಅವರು ಯೋಗಾ ಮಾಡುವ ಮೂಲಕ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಆರ್.ಲತಾ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್. ಕಬಾಡೆ, ಯೋಗಾ ತರಬೇತುದಾರ ಗೋವಿಂದ್, ಪತಂಜಲಿ ಯೋಗ ಸಂಸ್ಥೆ ಚಿಕ್ಕಬಳ್ಳಾಪುರ, ಮುದ್ದೇನಹಳ್ಳಿ ಸರ್ಕಾರಿ ಪ್ರೌಢಶಾಲೆ, ನಂದಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಸಿದ್ಧಾರ್ಥ ಪ್ರೌಢಶಾಲೆಯ ವಿದ್ಯಾರ್ಥಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಸ್ತುತ ವರ್ಷದಲ್ಲಿ 8 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಇರುವುದರಿಂದ, ರಾಜ್ಯಾದ್ಯಂತ 75 ಪ್ರಮುಖ ಪಾರಂಪರಿಕ ಸ್ಥಳಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಸ್ಥಳಗಳಾದ ಶ್ರೀ ಭೋಗನಂದೀಶ್ವರ ದೇವಸ್ಥಾನದ ಆವರಣ ವಿಧುರಾಶ್ವತ್ಥ ಕ್ಷೇತ್ರದ ಆವರಣ ಹಾಗೂ ಕೈವಾರದ ಶ್ರೀ ಯೋಗಿ ನಾರೇಯಣ ಕ್ಷೇತ್ರದ ಆವರಣದಲ್ಲಿ ಏಕಕಾಲಕ್ಕೆ ಸಾಮೂಹಿಕ ಯೋಗ ಪ್ರದರ್ಶನ ಜರುಗಿತು.

Recent Articles

spot_img

Related Stories

Share via
Copy link
Powered by Social Snap