ಚಿಕ್ಕಬಳ್ಳಾಪುರದಲ್ಲಿ ” ಸಕಾಲ ಅರಿವು ಜಾಥಾ” ಆಂದೋಲನ

ಚಿಕ್ಕಬಳ್ಳಾಪುರ:

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ರಾಜ್ಯ ಸರ್ಕಾರವು ಜಾರಿಗೆ ತಂದ ಮಹತ್ವಾಕಾಂಕ್ಷಿ ಯೋಜನೆಯಾದ ಸಕಾಲ ಯೋಜನೆ ಜಾರಿಯಾಗಿ ಯಶಸ್ವಿ 10 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ” ಸಕಾಲ ಅರಿವು ಜಾಥಾ” ಕಾರ್ಯಕ್ರಮ ಜಿಲ್ಲೆಯಾದ್ಯಂತ ಬುಧವಾರ ನಡೆಯಿತು. ಅದರ ಭಾಗವಾಗಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಸಕಾಲ ಅರ್ಜಿದಾರರಿಗೆ ಮ್ಯೂಟೇಷನ್ ಹಾಗೂ ಪಹಣಿಗಳನ್ನು ವಿತರಿಸಿದರು ಹಾಗೂ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸಕಾಲ ಅರಿವು ಜಾಥಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಇಂದು…ನಾಳೆ…ಇನ್ನಿಲ್ಲ…ಹೇಳಿದ ದಿನ ತಪ್ಪೋಲ್ಲ! ಎಂಬ ಧ್ಯೇಯ ವಾಕ್ಯದ ಜನ ಪ್ರಿಯ ಸಕಾಲ ಯೋಜನೆಯ ಸೌಲಭ್ಯಗಳನ್ನು ಸಾರ್ವಜನಿಕರು ಹೆಚ್ಚು ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ಇಲಾಖೆಯಲ್ಲಿ ಸಕಾಲ ಸೇವೆಗಳಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಲ್ಲಿ ಜಿ.ಎಸ್.ಸಿ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಕಾಲ ಯೋಜನೆಯ ವಿವಿಧ ಸೌಲಭ್ಯಗಳ ಕುರಿತು ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link