ಚಿತ್ತಾಪುರ : ಪರಾಜಿತ ಅಭ್ಯರ್ಥಿಯಿಂದ ಅಪಪ್ರಚಾರ :ಬಂಧನ

ಕಲಬುರಗಿ:

    ಬಿಜೆಪಿ ಕಾರ್ಯಕರ್ತ ದೇವಾನಂದ ರಾಮಚಂದ್ರ ಕೊರಬ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಬೆಂಬಲಿಗರಾಗಿದ್ದು, ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ರಾಥೋಡ್‌ ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದರು.

    ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಮಾಡಿದ ಆರೋಪದಡಿ ಪೊಲೀಸರು ಬುಧವಾರ ಬೆಳಗ್ಗೆ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಂಧನಕ್ಕೊಳಪಡಿಸಿದ್ದಾರೆ.

    ಅಲ್ಲದೆ, ರಾಥೋಡ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಚಿತ್ತಾಪುರದಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದರು. ಆದರೆ, ಕಲಬುರಗಿಯಿಂದ ಚಿತ್ತಾಪುರಕ್ಕೆ ತೆರಳುವುದಕ್ಕೂ ಮುನ್ನವೇ ರಾಥೋಡ್ ಅವರನ್ನು ಬಂಧಿಸಲಾಗಿದೆ.ರಾಥೋಡ್ ಬಂಧನದ ಬಳಿಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ರಾಥೋಡ್ ಬಿಡುಗಡೆಗೆ ಒತ್ತಾಯಿಸಿ ಒತ್ತಾಯಿಸಿದರು.
    ಮಣಿಕಂಠ ರಾಥೋಡ್ ಅವರು, ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರದಿಂದ ಪ್ರಿಯಾಂಕ್ ವಿರುದ್ಧ 14,968 ಮತಗಳ ಅಂತರದಿಂದ ಸೋಲು ಕಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap