ಚುನಾವಣಾ ಕಾರ್ಯ ವೀಕ್ಷಣೆಗೆ ಅಮಿತ್‌ ಷಾರಿಂದ ಆಪ್ತ ನೇಮಕ

ಮೈಸೂರು:

     ಜಿದ್ದಾಜಿದ್ದಿ ಕ್ಷೇತರವಾಗಿರುವ ವರುಣಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಕಣಕ್ಕಿಳಿದಿದ್ದಾರೆ. ಸಿದ್ದು ವಿರುದ್ಧ ವರುಣಾದಿಂದ ಪ್ರಬಲ ಲಿಂಗಾಯತ ನಾಯಕ ಸೋಮಣ್ಣ ಅವರನ್ನು ಕಣಕ್ಕಿಳಿದಿರುವುದರಿಂದ ಹೈವೋಲ್ಟೇಜ್ ಕಣವಾಗಿದೆ.

    ಸಿದ್ದರಾಮಯ್ಯ ವಿರುದ್ಧ ವಸಚಿ ಸಚಿವ ಸೋಮಣ್ಣ ಅವರು ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಚಾರದ ನಿರ್ವಹಣೆ ಮತ್ತು ಕಾರ್ಯಕರ್ತರೊಂದಿಗೆ ನಿಕಟವಾಗಿ ಕೆಲಸ ಮಾಡಲು ಕೇಂದ್ರ ವೀಕ್ಷಕರಾಗಿ ತಮ್ಮ ಆಪ್ತ ದಿಲೀಪ್ ಕುಮಾರ್ ಜೈಸ್ವಾಲ್ ಅವರನ್ನು ನಿಯೋಜಿಸಿದ್ದಾರೆ.

    ಸಾಂಪ್ರದಾಯಿಕ ಕಾಂಗ್ರೆಸ್ ಮತಗಳಿಗೆ ಕತ್ತರಿ ಹಾಕಲು ಲಿಂಗಾಯತರು, ದಲಿತರು, ಪರಿಶಿಷ್ಟ ಪಂಗಡಗಳು, ಕುರುಬ ಮತ್ತು ಇತರ ಸಮುದಾಯಗಳ ಪ್ರಾಬಲ್ಯವಿರುವ ವರುಣಾ ಕ್ಷೇತ್ರದಲ್ಲಿ ಪಕ್ಷವು ಆಕ್ರಮಣಕಾರಿ ರೀತಿಯಲ್ಲಿ ಪ್ರಚಾರ ನಡೆಸುತ್ತಿದೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಲಿಂಗಾಯತ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ಇತರ ದಲಿತ ನಾಯಕರ ಗುಂಪನ್ನು ಪ್ರಚಾರಕ್ಕೆ ಕರೆತರಲು ಪಕ್ಷವು ಚಿಂತನೆ ನಡೆಸಿದ್ದು, ಕಳೆದ ಚುನಾವಣೆ ವೇಳೆ ಚಾಮುಂಡೇಶ್ವರಿ ಕ್ಷೇತ್ರದಿಂದ ಬಂದ ಫಲಿತಾಂಶವನ್ನು ಪುನರಾವರ್ತಿಸುವ ಪಕ್ಷದಲ್ಲಿಯೇ ಸಿದ್ದರಾಮಯ್ಯ ವಿರುದ್ಧ ವಿರೋಧಿ ಶಕ್ತಿಗಳನ್ನು ಉತ್ತೇಜಿಸಲು ಮುಂದಾಗಿದೆ.

    ರಾಜ್ಯದ ಬೇರೆ ಸ್ಥಳಗಳಲ್ಲಿ ಪ್ರಚಾರ ಮಾಡದಂತೆ ವರುಣಾ ಕ್ಷೇತ್ರದಲ್ಲಿ ಮಾತ್ರವೇ ಪ್ರಚಾರದಲ್ಲಿ ತೊಡಗಿಕೊಳ್ಳುವಂತೆ ಸಿದ್ದರಾಮಯ್ಯ ಅವರನ್ನು ಬ್ಯುಸಿಯಾಗಿರುವಂತೆ ಮಾಡಲು ಸೋಮಣ್ಣ ಮತ್ತು ಅವರ ತಂಡಕ್ಕೆ ಅಮಿತ್ ಶಾ ಸೂಚಿಸಿದ್ದಾರೆಂದು ತಿಳಿದುಬಂದಿದೆ.

    ಈ ನಡುವೆ ತಮ್ಮ ಕರ್ತವ್ಯ ನಿಭಾಯಿಸಲು ಈಗಾಗಲೇ ಮುಂದಾಗಿರುವ ಜೈಸ್ವಾಲ್ ಅವರು, ಚಾಮರಾಜನಗರ ಬೆಳವಣಿಗೆಗಳ ಬಗ್ಗೆ ದಿನನಿತ್ಯದ ಮಾಹಿತಿ ನೀಡುವಂತೆ ನಾಯಕರಿಗೆ ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ .ವರುಣಾದಲ್ಲಿ ಸೋಮಣ್ಣ ಕಣಕ್ಕಿಳಿಯುತ್ತಿದ್ದು, ಚಾಮರಾಜನಗರದಲ್ಲಿ ಪ್ರಚಾರಕ್ಕೆ ಹೊಡೆತ ಬೀಳದಂತೆ ನೋಡಿಕೊಳ್ಳುವಂತ ಸೂಚಿಸಿದ್ದಾರೆಂದು ಎಂದು ತಿಳಿದುಬಂದಿದೆ.

    ಈ ನಡುವೆ ಸೋಮಣ್ಣ ಅವರು, ಶನಿವಾರ ಚಾಮರಾಜನಗರದಲ್ಲಿ ಪ್ರಚಾರ ಆರಂಭಿಸಿದ್ದು, ಎರಡು ದಿನಗಳ ಕಾಲ ಪ್ರಚಾರ ನಡೆಯಲಿದ್ದಾರೆಂದು ತಿಳಿದುಬಂದಿದೆ.ಸೋಮಣ್ಣ ಅವರ ಪತ್ನಿ ಶ್ಯಾಲಾ ಬಿಜೆಪಿ ನಾಯಕಿ ಹಾಗೂ ಟಿಕೆಟ್ ಆಕಾಂಕ್ಷಿ ನಾಗಶ್ರೀ ಪ್ರತಾಪ್ ಅವರನ್ನು ಭೇಟಿ ಮಾಡಿದ್ದು, ಅವರ ಬೆಂಬಲ ಕೋರಿದ್ದಾರೆ.

    ಏಪ್ರಿಲ್ 19 ರಂದು ಸೋಮಣ್ಣ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕುಟುಂಬ ಸದಸ್ಯರು ಬೃಹತ್ ರ್ಯಾಲಿಗೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap