ಜೊತೆಗಿರದ ಜೀವ ಎಂದೆಂದಿಗೂ ಜೀವಂತ : ಸುಮಲತಾ

ಬೆಂಗಳೂರು:

     ರೆಬೆಲ್ ಸ್ಟಾರ್ ಅಂಬರೀಷ್ ಅವರ ಜನ್ಮದಿನ. ಈ ವಿಶೇಷ ದಿನದಂದು ಕುಟುಂಬದವರು, ಸೆಲೆಬ್ರಿಟಿಗಳು, ಫ್ಯಾನ್ಸ್​ ಅಂಬಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಂಬರೀಷ್ ಅವರಿಗೆ ಜನ್ಮದಿನದ ಶುಭಾಶಯ ಕೋರಲಾಗುತ್ತಿದೆ.

     ಈ ನಡುವೆ ಸುಮಲತಾ ತಮ್ಮ ಪ್ರೀತಿಯ ಪತಿ ಅಂಬರೀಶ್ ಮತ್ತು ಪುತ್ರ ಅಭಿಷೇಕ್ ಮಗುವಾಗಿದ್ದಾಗ ತೆಗೆದಿದ್ದ ಸುಂದರ ಫೋಟೋಗಳ ಗ್ಯಾಲರಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿ ಶುಭ ಕೋರಿದ್ದಾರೆ. ಅಂಬರೀಶ್ ಇಂದು ಬದುಕಿದ್ದರೆ 71 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಸಿನಿಮಾ ಹೊರತಾಗಿಯೂ ಅವರು ಅಭಿಮಾನಿಗಳ ಹೃದಯಕ್ಕೆ ಹತ್ತಿರವಾಗಿದ್ದವರು. ಅವರನ್ನು ಇಂದು ಅಭಿಮಾನಿಗಳು ಸ್ಮರಿಸಿಕೊಳ್ಳುತ್ತಿದ್ದಾರೆ.
 
     ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು.
 
     ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ.  ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ ಎಂದು ಫೇಸ್ ಬುಕ್ ನಲ್ಲಿ ಬರೆದು ಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap